
ಸಾಂದರ್ಭಿಕ ಚಿತ್ರ
ಬೆಂಗಳೂರು: ಪತ್ನಿಯೊಂದಿಗೆ ಜಗಳವಾಡಿ ಪತಿ ನೇಣಿಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯ ಬಸವೇಶ್ವರನಗರದ ಮಂಜುನಾಥ ನಗರದಲ್ಲಿ ನಡೆದಿದೆ.
28 ವರ್ಷದ ಅನಿಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನಲ್ಲಿದ್ದ ತನ್ನ ಪತ್ನಿಯೊಂದಿಗೆ ಜಗಳವಾಡಿಕೊಂಡಿದ್ದ ಅನಿಲ್ ಕುಡಿದ ಅಮಲಿನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು.
ಈ ವೇಳೆ ಅನುಮಾನಗೊಂಡ ಅನಿಲ್ ಮನೆಯ ಅಕ್ಕ ಪಕ್ಕದವರು ಕಿಟಕಿ ಮೂಲಕ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಅನಿಲ್ ಅವರನ್ನು ಸಮಾಧಾನ ಪಡಿಸಲು ಯತ್ನಿಸಿದ್ದರು. ಆದರೂ, ಸಮಾಧಾನಗೊಳ್ಳದ ಅನಿಲ್ ಆತ್ಮಹತ್ಯೆಗೆ ಶರಣಾಗಿದ್ದು, ಘಟನೆ ದೃಶ್ಯವನ್ನು ನೆರೆಮನೆಯವರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಅಕ್ಕ ಪಕ್ಕದವರು ಬಂದು ಅನಿಲ್ ಮನೆಯ ಬಾಗಿಲು ಮುರಿದು ಒಳಹೋಗುವಷ್ಟರಲ್ಲಿ ಅನಿಲ್ ಮೃತಪಟ್ಟಿದ್ದರು ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.