ರಾಜ್ಯದ ಎಲ್ಲ ವಿವಿಗಳಿಗೆ ಎನ್‌ಐಆರ್‌ಎಫ್‌ ರ್ಯಾಂಕ್‌, ನ್ಯಾಕ್‌ ಮಾನ್ಯತೆ: ಡಿಸಿಎಂ ಅಶ್ವತ್ಥನಾರಾಯಣ

ಉನ್ನತ ಶಿಕ್ಷಣ ವಿಭಾಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವತ್ತ ವೇಗದ ಹೆಜ್ಜೆಗಳನ್ನು ಇಡುತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ರಾಜ್ಯದ ಎಲ್ಲ ವಿಶ್ವವಿದ್ಯಾಲಯ-ಕಾಲೇಜುಗಳಿಗೆ ನ್ಯಾಕ್‌ ಮಾನ್ಯತೆ,

Published: 19th January 2021 08:36 PM  |   Last Updated: 19th January 2021 08:36 PM   |  A+A-


Ashwath Narayan

ಸಿ.ಎನ್. ಅಶ್ವತ್ಥನಾರಾಯಣ

Posted By : Lingaraj Badiger
Source : UNI

ಬೆಂಗಳೂರು: ಉನ್ನತ ಶಿಕ್ಷಣ ವಿಭಾಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವತ್ತ ವೇಗದ ಹೆಜ್ಜೆಗಳನ್ನು ಇಡುತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ರಾಜ್ಯದ ಎಲ್ಲ ವಿಶ್ವವಿದ್ಯಾಲಯ-ಕಾಲೇಜುಗಳಿಗೆ ನ್ಯಾಕ್‌ ಮಾನ್ಯತೆ, ಎನ್‌ಐಆರ್‌ಎಫ್‌ ರ್ಯಾಂಕ್‌ ಪಡೆಯುವ ಸಂಬಂಧ 15 ದಿನಗಳ ಒಳಗಾಗಿ ಕ್ರಿಯಾ ಯೋಜನೆ ಸಲ್ಲಿಸುವಂತೆ ಎಲ್ಲ ಕುಲಪತಿಗಳಿಗೆ ಗಡುವು ವಿಧಿಸಿದ್ದಾರೆ.

ಸರ್ಕಾರದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ ನಡೆಸಿ ಸುಮಾರು 3 ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದರು.

"ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನಮ್ಮ ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲೊಂದು ಬಹುದೊಡ್ಡ ಬದಲಾವಣೆ. ಇದಕ್ಕೆ ಅನುಗುಣವಾಗಿ ನಾವೆಲ್ಲ ಹೆಜ್ಜೆ ಇಡಬೇಕು. ಸ್ಪರ್ಧಾತ್ಮಕವಾಗಿರುವ ಈ ಸಂದರ್ಭದಲ್ಲಿ ಪ್ರತಿ ವಿವಿಯು ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಚೌಕಟ್ಟಿನ ನ್ಯಾಕ್ ರ್ಯಾಂಕ್ ಹೊಂದಿರಬೇಕು ಹಾಗೂ ಪ್ರತಿ ಕಾಲೇಜ್‌ಗೂ ನ್ಯಾಕ್‌ ಮಾನ್ಯತೆ(NAAC Accreditation) ಇರಲೇಬೇಕು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಮೊದಲಿನಂತೆ ನಿಧಾನಗತಿಯಲ್ಲಿ ಕೆಲಸ ಮಾಡಿದರೆ ಸಾಲುವುದಿಲ್ಲ. ಬದಲಾಗುತ್ತಿರುವ ಜಗತ್ತಿಗೆ ಅನುಗುಣವಾಗಿ ಓಡಬೇಕು. ಜಾಗತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಏನೇನಾಗುತ್ತಿದೆ ಎಂಬುದನ್ನು ಗಮನಿಸಬೇಕು. ಅದರಂತೆ ನಮ್ಮ ವಿವಿಗಳನ್ನು ವರ್ತಮಾನದ ಅಗತ್ಯಗಳಿಗೆ ಅನುಗುಣವಾಗಿ ಮರುರೂಪಿಸಬೇಕು. ಅದಕ್ಕೆ ಶಿಕ್ಷಣ ನೀತಿಯನ್ನು ಜೋಡಿಸಬೇಕು ಹಾಗೂ ಜಾಗತಿಕವಾಗಿ ಎಲ್ಲರೂ ಒಪ್ಪಿರುವ ಇಂಥ ರ್ಯಾಂಕ್-ಮಾನ್ಯತೆ ಅತ್ಯಗತ್ಯ ಎಂದು ಕುಲಪತಿಗಳಿಗೆ ಉಪ ಮುಖ್ಯಮಂತ್ರಿ ಸಲಹೆ ನೀಡಿದರು.


Stay up to date on all the latest ರಾಜ್ಯ news
Poll
Yediyurappa

ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದೇ?


Result
ಹೌದು
ಇಲ್ಲ
flipboard facebook twitter whatsapp