ಮುಖ್ಯಮಂತ್ರಿಗೆ ಸಲಹೆಗಾರರ ನೇಮಕ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು 8 ಮಂದಿಯನ್ನು ತಮ್ಮ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿ ಮಾಡಿದೆ. 

Published: 19th January 2021 09:48 AM  |   Last Updated: 19th January 2021 12:56 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರು 8 ಮಂದಿಯನ್ನು ತಮ್ಮ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿ ಮಾಡಿದೆ. 

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಿಗೆ ಸಚಿವ ಸ್ಥಾನಮಾನ ನೀಡಿರುವುದನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. 

ಸಚಿವ ಸ್ಥಾನಮಾನ ನೀಡಲು ಸಂವಿಧಾನದಲ್ಲಿ ಮಿತಿ ಇದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತು ಮಾಧ್ಯಮ ಸಲಹೆಗಾರರಿಗೂ ಈ ಸ್ಥಾನಮಾನ ನೀಡಲಾಗಿದೆ. ಹಾಗಾಗಿ, ಕಾನೂನುಬಾಹಿರ ನೇಮಕ ರದ್ದುಪಡಿಸಲು ಅರ್ಜಿದಾರರ ಪರ ವಕೀಲ ಎಸ್.ಬಸವರಾಜ್ ಮನವಿ ಮಾಡಿದ್ದರು. ಅಷ್ಟೂ ಜನರಿಗೆ ಸಂಪುಟ ದರ್ಜೆಯ ಸ್ಥಾನ ನೀಡಿ ನೇಮಕ ಮಾಡಿರುವುದು ಸಂವಿಧಾನದ 164 1(ಎ) ಉಲ್ಲಂಘನೆ ಮಾಡಿದಂತಾಗಿದೆ.

ಮಹದೇವ ಪ್ರಕಾಶ್‌, ಮೋಹನ್ ಲಿಂಬಿಕಾಯಿ, ಜಿ.ಎಸ್.‌ ಸುನೀಲ್‌, ಶಂಕರ‌ಗೌಡ ಪಾಟೀಲ, ಎಂ.ಪಿ. ರೇಣುಕಾಚಾರ್ಯ, ಬೇಳೂರು ಸುದರ್ಶನ್, ಎಂ.ಬಿ. ಮರಂಕಲ್ ಮತ್ತು ಲಕ್ಷ್ಮೀನಾರಾಯಣ ಅವರನ್ನು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲಾಗಿತ್ತು. ಇವರಲ್ಲಿ ಮೂವರು ಇತ್ತೀಚೆಗೆ ರಾಜೀನಾಮೆ ನೀಡಿದ್ದಾರೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಸಂವಿಧಾನದ ಪ್ರಕಾರ ಶಾಸನ ಸಭೆಯ ಸದಸ್ಯರ ಸಂಖ್ಯೆಯಲ್ಲಿ ಸಂಪುಟ ದರ್ಜೆ ಸಚಿವರ ಸಂಖ್ಯೆ ಶೇ 15ಕ್ಕಿಂತ ಹೆಚ್ಚಿಗೆ ಇರುವಂತಿಲ್ಲ. ಅದರ ಪ್ರಕಾರ 34 ಜನರಿಗೆ ಮಾತ್ರ ಸಚಿವ ಸ್ಥಾನ ನೀಡಬಹುದು. ಸಲಹೆಗಾರರನ್ನು ನೇಮಿಸಿಕೊಂಡು ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವ ಮೂಲಕ ಸಂವಿಧಾನ ಉಲ್ಲಂಘಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಹೀಗಾಗಿ, ರೇಣುಕಾಚಾರ್ಯ ಸೇರಿದಂತೆ ಪ್ರತಿವಾದಿಗಳಿಗೆ ಹೈಕೋರ್ಟ್​ಗೆ ನೋಟಿಸ್ ಜಾರಿಮಾಡಿದೆ.

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp