ಕೃಷಿ ಮಸೂದೆ ವಿರೋಧಿಸಿ ರಾಜಭವನ ಚಲೋ ರ್ಯಾಲಿ: ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬೆಳಗಾವಿ ರೈತರು ಭಾಗಿ
ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ವಿವಾದಿತ ಕೃಷಿ ಕಾಯ್ದಗಳ ವಿರುದ್ಧ ರೈತ ಸಮೂಹ ನಡೆಸುತ್ತಿರುವ ಹೋರಾಟವನ್ನು ಬಂಬಲಿಸಿ ಕಾಂಗ್ರೆಸ್ ಪಕ್ಷ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಾಗೂ ರಾಜಭವನ ಚಲೋ ಹಮ್ಮಿಕೊಂಡಿದ್ದು, ಈ ಪ್ರತಿಭಟನೆಯಲ್ಲಿ ಬೆಳಗಾವಿ ರೈತರೂ ಕೂಡ ಪಾಲ್ಗೊಳ್ಳಲಿದ್ದಾರೆ.
Published: 20th January 2021 08:33 AM | Last Updated: 20th January 2021 12:57 PM | A+A A-

ರೈತರೊಂದಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ವಿವಾದಿತ ಕೃಷಿ ಕಾಯ್ದಗಳ ವಿರುದ್ಧ ರೈತ ಸಮೂಹ ನಡೆಸುತ್ತಿರುವ ಹೋರಾಟವನ್ನು ಬಂಬಲಿಸಿ ಕಾಂಗ್ರೆಸ್ ಪಕ್ಷ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ, ಸಮಾವೇಶ ಹಾಗೂ ರಾಜಭವನ ಚಲೋ ಹಮ್ಮಿಕೊಂಡಿದ್ದು, ಈ ಪ್ರತಿಭಟನೆಯಲ್ಲಿ ಬೆಳಗಾವಿ ರೈತರೂ ಕೂಡ ಪಾಲ್ಗೊಳ್ಳಲಿದ್ದಾರೆಂದು ವರದಿಗಳು ತಿಳಿಸಿವೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ರೈತರು ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ.
ಪ್ರತಿಭಟನೆ ಕುರಿತು ಹೇಳಿಕೆ ನೀಡಿರುವ ಹೆಬ್ಬಾಳ್ಕರ್ ಅವರು, ಭಾರತ ಅತೀ ಹೆಚ್ಚಾಗಿ ಕೃಷಿ ಕ್ಷೇತ್ರದ ಮೇಲೆ ಅವಲಂಬಿತವಾಗಿದೆ. ರೈತರನ್ನು ನಿರ್ಲಕ್ಷ್ಯದಿಂದ ನೋಡಬಾರದು ಎಂದು ಹೇಳಿದ್ದಾರೆ.
ಹಲವು ದಶಕಗಳಿಂದ, ಕಾಂಗ್ರೆಸ್ ರೈತರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿತ್ತು ಮತ್ತು ಕೃಷಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸಿದೆ. ಆದಾಗ್ಯೂ, ಕೇಂದ್ರ ಸರ್ಕಾರ ಇತ್ತೀಚೆಗೆ ರೈತರ ವಿರೋಧಿ ನೀತಿಗಳನ್ನು ಜಾರಿಗೆ ತಂದಿದ್ದು, ಅದು ರೈತರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.
ಬೆಳಗಾವಿ ಗ್ರಾಮೀಣ ಭಾಗದಿಂದ ನೂರಾರು ರೈತರು ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿ್ದಾರೆ. ರೈತರಿಗಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ವಾಹನವು ರೈತರನ್ನು ಬೆಂಗಳೂರಿಗೆ ಕರೆದೊಯ್ಯಲಿದೆ ಎಂದಿದ್ದಾರೆ.