ರಾಜ್ಯದಲ್ಲಿ ಇಂದು ಕೊರೋನಾದಿಂದ ನಾಲ್ವರು ಸಾವು, ಹೊಸದಾಗಿ 501 ಜನರಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಬುಧವಾರ 501 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,33,578ಕ್ಕೆ ಏರಿಕೆಯಾಗಿದೆ.
Published: 20th January 2021 07:15 PM | Last Updated: 20th January 2021 07:15 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಬುಧವಾರ 501 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,33,578ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,185ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 260 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,95,769ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 665 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,13,677ಕ್ಕೆ ಏರಿಕೆಯಾಗಿದೆ. ಇನ್ನು 7,697 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 168 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದಿನ 20/01/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/P8A0wzBs1y pic.twitter.com/ihz5s2S0Cy
— K'taka Health Dept (@DHFWKA) January 20, 2021