ಬಂಧಿಸಲು ಬಂದ ಪೊಲೀಸ್ ಗೆ ಚಾಕುವಿನಿಂದ ದಾಳಿ; ಗುಂಡಿಕ್ಕಿ ದರೋಡೆಕೋರನ ಬಂಧನ

ಬಂಧಿಸಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕುಖ್ಯಾತ ದರೋಡೆಕೋರ ರಾಜೇಶ್ ಅಲಿಯಾಸ್ ಲೂಸ್ ಗೆ ಬ್ಯಾಡರಹಳ್ಳಿ ಪೊಲೀಸರು ಗುಂಡಿಕ್ಕಿ ಬಂಧಿಸಿದ್ದಾರೆ.

Published: 21st January 2021 11:16 AM  |   Last Updated: 21st January 2021 12:59 PM   |  A+A-


Bengaluru Police fire

ಸಾಂದರ್ಭಿಕ ಚಿತ್ರ

Posted By : Srinivasamurthy VN
Source : UNI

ಬೆಂಗಳೂರು: ಬಂಧಿಸಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕುಖ್ಯಾತ ದರೋಡೆಕೋರ ರಾಜೇಶ್ ಅಲಿಯಾಸ್ ಲೂಸ್ ಗೆ ಬ್ಯಾಡರಹಳ್ಳಿ ಪೊಲೀಸರು ಗುಂಡಿಕ್ಕಿ ಬಂಧಿಸಿದ್ದಾರೆ.

ಪೊಲೀಸರ ಗುಂಡೇಟು ಬಲಗಾಲಿಗೆ ಗಾಯಗೊಂಡ ಕೆಂಗೇರಿಯ ರಾಜೇಶ್ ಅಲಿಯಾಸ್ ಲೂಸ್(20) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಲೂಸ್ ನನ್ನು ಸೆರೆಹಿಡಿಯಲು ಹೋಗಿದ್ದ ಹೆಡ್ ಕಾನ್ಸ್ ಸ್ಟೆಬಲ್ ಶ್ರೀನಿವಾಸ್ ಮೇಲೆ‌ ಚಾಕುವಿನಿಂದ ಹಲ್ಲೆ ನಡೆಸಿದ್ದು ಗಾಯಗೊಂಡ ಅವರನ್ನು ಖಾಸಗಿ‌ ಆಸ್ಪತ್ರೆಗೆ ದಾಖಲಾಗಿದೆ ಎಂದು ಡಿಸಿಪಿ ಡಾ.ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಆರೋಪಿ ರಾಜೇಶ್ ಸೇರಿ ಮೂವರು ಆರೋಪಿಗಳು ಕಳೆದ ಜ.17ರಂದು ಬ್ಯಾಡರಹಳ್ಳಿಯಲ್ಲಿರುವ ತರಕಾರಿ ಸರಬರಾಜು ಮಾಡುವ ನಿಂಜಾ ಕಾರ್ಟ್ ಕಂಪನಿಗೆ ಏಕಾಏಕಿ ನುಗ್ಗಿ ಚಾಕು ತೋರಿಸಿ ಸಿಬ್ಬಂದಿಗೆ ಬೆದರಿಸಿದ್ದರು.

ಸಿಬ್ಬಂದಿಯ ಎರಡು ಮೊಬೈಲ್ ಕಸಿದುಕೊಂಡು ಒಡೆದು ಹಾಕಿ 6.5ಲಕ್ಷ ನಗದು ದೋಚಿ ಪರಾರಿಯಾಗುವಾಗ ಸಿಸಿಟಿವಿ ಸೇರಿದಂತೆ ಇನ್ನಿತರ ಸಾಕ್ಷ್ಯ ಒದಗಿಸುವ ಉಪಕರಣಗಳನ್ನು ಒಡೆದು ಹಾಕಿ‌ದ್ದರು. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇನ್ಸ್ಪೆಕ್ಟರ್ ರಾಜೀವ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ತಂಡವು ಕೃತ್ಯ ನಡೆಸಿದವರ ಪತ್ತೆಗೆ ಶೋಧ ಕೈಗೊಂಡಿದ್ದಾಗ ದಾಸರಹಳ್ಳಿಯ ಬ್ರಹ್ಮದೇವರಗುಡ್ಡದ ಬಳಿ ಇಂದು ಮುಂಜಾನೆ 5ರ ವೇಳೆ ದರೋಡೆಕೋರ ಲೂಸ್ ಅಡಗಿರುವ ಮಾಹಿತಿ ಲಭ್ಯವಾಗಿದೆ.

ತಕ್ಷಣ ಈ ತಂಡ ಕಾರ್ಯಾಚರಣೆ ಕೈಗೊಂಡಿದೆ. ಪೊಲೀಸರ ಜೀಪ್ ಬರುತ್ತಿರುವುದನ್ನು ಕಂಡ ಲೂಸ್ ಓಡಿ ಹೋಗ ತೊಡಗಿದ್ದು ಆತನನ್ನು ಬೆನ್ನಟ್ಟಿ ಬಂಧಿಸಲು ತೆರಳಿದಾಗ ಮುಖ್ಯ ಪೇದೆ ಶ್ರೀನಿವಾಸ್ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದು ಚಾಕು ಎಸೆದು ಶರಣಾಗುವಂತೆ ಸೂಚಿಸಿದರೂ ಮತ್ತೆ ಹಲ್ಲೆ ಮುಂದಾದಾಗ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಎಚ್ಚರಿಕೆ ನೀಡಲಾಗಿದೆ.

ಆದರೂ ಮತ್ತೆ ಹಲ್ಲೆಗೆ ಮುಂದಾದ ಲೂಸ್ ಮೇಲೆ ಆತ್ಮರಕ್ಷಣೆಗೆ ಹಾರಿಸಿದ ಇನ್ಸ್ಪೆಕ್ಟರ್ ರಾಜೀವ್ ಅವರು ಮತ್ತೊಂದು ಸುತ್ತು ಗುಂಡು ಹಾರಿಸಿದ್ದು ಅದು ಬಲಗಾಲಿಗೆ ತಗುಲಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ

ಕೂಡಲೇ ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ನಿಂಜಾ ಕಾರ್ಟ್ ಕಂಪನಿಗೆ ಏಕಾಏಕಿ ನುಗ್ಗಿ ಚಾಕು ತೋರಿಸಿ ದರೋಡೆ ನಡೆಸಿದ ಪ್ರಕರಣ ದ ಸಂಬಂಧ ಮೂವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಇನ್ನೂ ಕೆಲವರ ಬಂಧನಕ್ಕೆ ಶೋಧ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp