ಯೋಗೀಶ್ ಗೌಡ ಹತ್ಯೆ ಕೇಸ್: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
Published: 21st January 2021 03:13 PM | Last Updated: 21st January 2021 04:08 PM | A+A A-

ವಿನಯ್ ಕುಲಕರ್ಣಿ
ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಇದಕ್ಕೆ ಹಿಂದೆ ಧಾರವಾಡ ವಿಶೇಷ ಸಿಬಿಐ ನ್ಯಾಯಾಲಯ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಜಾಗೊಳಿಸಿದ್ದ ಹಿನ್ನೆಲೆ ಅವರು ಹೈಕೋರ್ಟ್ ಮೊರೆ ಹೋಗಿದ್ದರು, ನಿನ್ನೆ ಇಡೀ ದಿನ ವಿಚಾರಣೆ ಆಲಿಸಿದ ನಂತರ ಇಂದು ಧಾರವಾಡದಲ್ಲಿನ ಹೈಕೋರ್ಟ್ ಪೀಠ ವಿನಯ್ ಕುಲಕರ್ಣಿ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಪ್ರಸ್ತುತ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದದಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.