ಕನ್ನಡ ಧ್ವಜ ತೆರವಿಗೆ ನಡೆಸುತ್ತಿರುವ ಹೋರಾಟವನ್ನು ಮುಲಾಜಿಲ್ಲದೇ ಹತ್ತಿಕ್ಕಿ; ಕುಮಾರಸ್ವಾಮಿ ಒತ್ತಾಯ

ನಮ್ಮ ನೆಲ, ನಮ್ಮ ಭಾಷೆ, ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್‌, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು? ಇವರ ಬಾಧೆಯಾದರೂ ಏನು? ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಇವರು ಇಂದು ನಡೆಸುತ್ತಿರುವ ಪ್ರತಿಭಟನೆ ಸಮಾಜವಿರೋಧಿ. ಇವರ ಮನಸ್ಸಲ್ಲಿರುವ ವಿಷ ದೇಶದ್ರೋಹಕ್ಕೆ ಸಮ...

Published: 21st January 2021 10:42 AM  |   Last Updated: 21st January 2021 10:42 AM   |  A+A-


HD Kumaraswamy

ಹೆಚ್.ಡಿ.ಕುಮಾರಸ್ವಾಮಿ

Posted By : Manjula VN
Source : UNI

ಬೆಂಗಳೂರು: ನಮ್ಮ ನೆಲ, ನಮ್ಮ ಭಾಷೆ, ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್‌, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು? ಇವರ ಬಾಧೆಯಾದರೂ ಏನು? ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಇವರು ಇಂದು ನಡೆಸುತ್ತಿರುವ ಪ್ರತಿಭಟನೆ ಸಮಾಜವಿರೋಧಿ. ಇವರ ಮನಸ್ಸಲ್ಲಿರುವ ವಿಷ ದೇಶದ್ರೋಹಕ್ಕೆ ಸಮ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು ಎಂದು ಒತ್ತಾಯಿಸಿದ್ದಾರೆ.

ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ಜಜ ತೆರವಿಗಾಗಿ ಎಂಇಎಸ್‌, ಶಿವಸೇನೆ ಇಷ್ಟು ಕುತಂತ್ರ ಮಾಡುತ್ತಿದ್ದರೂ, ಬಿಜೆಪಿ ಸರ್ಕಾರದ ಯಾವೊಬ್ಬ ಪ್ರತಿನಿಧಿಯಾಗಲಿ, ಕಾಂಗ್ರೆಸ್‌ನ ಯಾವ ನಾಯಕರಾಗಲಿ ಪ್ರತಿಕ್ರಿಯಿಸಿದ್ದನ್ನು ನಾನು ನೋಡಲಿಲ್ಲ. ಇದೇ ಸಲುಗೆಯಲ್ಲೇ ಉದ್ಧವ ಠಾಕ್ರೆ ಬೆಳಗಾವಿಯಂಥ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಮಾತಾಡಿದ್ದು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp