ಜಾನುವಾರು ಸಂರಕ್ಷಣೆಯ ಹೆಸರಿನಲ್ಲಿ ಸಂವಿಧಾನ ಬಾಹಿರ ಸುಗ್ರಿವಾಜ್ಞೆ: ಎಸ್ಡಿಪಿಐ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್.ಡಿ.ಪಿ.ಐ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿಯ ಸಭೆಯು ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್‌ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಡಿಕೇರಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್.ಡಿ.ಪಿ.ಐ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿಯ ಸಭೆಯು ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್‌ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾನುವಾರು ಸಂರಕ್ಷಣೆಯ ಹೆಸರಿನಲ್ಲಿ ರಾಜ್ಯ ಸರ್ಕಾರ ಸಂವಿಧಾನ ಬಾಹಿರವಾಗಿ ಸುಗ್ರಿವಾಜ್ಞೆ ಹೊರಡಿಸಿದೆ. ಈ ವಿಷಯ ಸುಪ್ರೀಂಕೋರ್ಟಿನ ಕೆಲ ನಿವೃತ್ತ ನ್ಯಾಯಾಧೀಶರು ಹಾಗೂ ಕಾನೂನು ಪಂಡಿತರು ಬಹಿರಂಗವಾಗಿ ಟೀಕಿಸಿದ್ದಾರೆ. ಇದರಿಂದ ರೈತರು ಆರ್ಥಿಕವಾಗಿ ತುಂಬಾ ನಷ್ಟಕ್ಕೆ ಒಳಗಾಗಲಿದ್ದಾರೆ ಹಾಗೂ ಬಡವರಿಗೆ ಅಗ್ಗದ ಬೆಲೆಯಲ್ಲಿ ಸಿಗುವ ಪೌಷ್ಠಿಕ ಆಹಾರವನ್ನು ಕಸಿದಂತಾಗುತ್ತದೆ. ಮಾಂಸ ಹಾಗೂ ಚರ್ಮದ ವ್ಯಾಪಾರಗಳನ್ನು ಮೆಚ್ಚಿಕೊಂಡ ಲಕ್ಷಾಂತರ ಕುಟುಂಬಗಳು ಬೀದಿಪಾಲಾಗುವ ಅಪಾಯ ಇದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಈ ಸುಗ್ರೀವಾಜ್ಞೆಯನ್ನು ರದ್ದುಗೊಳಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಸರ್ಕಾರ ಗೋಸಂರಕ್ಷಣೆಯ ಹೆಸರಿನಲ್ಲಿ ನೀಡುತ್ತಿರುವ ಉಚಿತ ಭೂಮಿ, ಹಣಕಾಸು ನಿಧಿ ಮತ್ತಿತರ ಸೌಲಭ್ಯಗಳನ್ನು ಕೇವಲ ಮಠ ಮತ್ತು ಆರ್.ಎಸ್.ಎಸ್ ಬೆಂಬಲಿಗ ಸಂಸ್ಥೆಗಳಿಗೆ ನೀಡುತ್ತಿದ್ದು, ರೈತ ಸಂಘ, ಮಹಿಳಾ ಸಂಘ, ಮುಸ್ಲಿಮರ ಮಸೀದಿ, ಕ್ರೈಸ್ತರ ಚರ್ಚ್ ಹಾಗೂ ಮತ್ತಿತ್ತರ ಸೇವಾ ಸಂಸ್ಥೆಗಳಿಗೂ ಕೂಡಲೇ ಸಮಾನವಾಗಿ ನೀಡಬೇಕು. ಈ ಬಗ್ಗೆ ಪಕ್ಷ ತೀವ್ರ ಹೋರಾಟ ನಡೆಸಬೇಕು ಎಂದು ತೀರ್ಮಾನಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com