ಜ್ಯುವೆಲ್ಲರಿಯಲ್ಲಿ ಕಳ್ಳತನ: ಮೂವರ ಬಂಧನ, 44 ಲಕ್ಷ ರೂ. ಚಿನ್ನಾಭರಣ ವಶ
ಜ್ಯುವೆಲ್ಲರಿ ಅಂಗಡಿಯಲ್ಲಿ ಚಿನ್ನಾಭರಣ ದೋಚಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಸಿ.ಟಿ.ಮಾರ್ಕೆಟ್ ಪೊಲೀಸರು, 40.25 ಲಕ್ಷ ರೂ.ಮೌಲ್ಯದ ಚಿನ್ನಾಭರಣ, 2 ಕೆ.ಜಿ.ತೂಕದ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
Published: 21st January 2021 11:56 AM | Last Updated: 21st January 2021 01:02 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಜ್ಯುವೆಲ್ಲರಿ ಅಂಗಡಿಯಲ್ಲಿ ಚಿನ್ನಾಭರಣ ದೋಚಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಸಿ.ಟಿ.ಮಾರ್ಕೆಟ್ ಪೊಲೀಸರು, 40.25 ಲಕ್ಷ ರೂ.ಮೌಲ್ಯದ ಚಿನ್ನಾಭರಣ, 2 ಕೆ.ಜಿ.ತೂಕದ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬಿಖಾರಾಮ್ ದೇವಸಿ, ಅಮರ್ ಸಿಂಗ್, ಉತ್ತಮ್ ರಾಣಾ ಬಂಧಿತ ಆರೋಪಿಗಳು. ಪ್ರವೀಣ್ ಜ್ಯುವೆಲ್ಲರಿ ಅಂಗಡಿಯಲ್ಲಿ ಕಳೆದ ವರ್ಷ ಅಕ್ಟೋಬರ್ 29ರಂದು ರಾತ್ರಿ ಕಳ್ಳರು ಅಂಗಡಿಯ ಬೀಗ ಮುರಿದು ಒಳ ಪ್ರವೇಶಿಸಿ ಚಿನ್ನಾಭರಣ, ಬೆಳ್ಳಿಯ ಆಭರಣಗಳನ್ನು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
6 ಪ್ರಕರಣ ಪತ್ತೆ, 916 ಗ್ರಾಂ ಚಿನ್ನಾಭರಣ ವಶ
ಮತ್ತೊಂದು ಪ್ರಕರಣದಲ್ಲಿ ಬೀಗ ಹಾಕಿದ ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಗುಂಪನ್ನು ಕೋಣನಕುಂಟೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೀಗ ಹಾಕಿರುವ ಮನೆಗಳನ್ನು ಗುರುತಿಸಿಕೊಳ್ಳುತ್ತಿದ್ದ ಈ ಕಳ್ಳರು ರಾತ್ರಿ ಹೊತ್ತು ಕಳ್ಳತನ ಮಾಡುತ್ತಿದ್ದರು. ಅಬ್ರಾಹಂ, ಧನುಷ್, ಕಾಂತರಾಜು, ಅನಂತರಾಜು, ಗಗನ್, ಕಾರ್ತಿಕ್ ಬಂಧಿತರು. ಬಂಧಿತರಿಂದ ಕೋಣನಕುಂಟೆ ಪೊಲೀಸರು 916 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಒಟ್ಟು 6 ಪ್ರಕರಣಗಳು ಪತ್ತೆಯಾಗಿವೆ.