ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ: ನಗದು, ಚಿನ್ನಾಭರಣ ವಶ
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಶುಕ್ರವಾರ ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಆಂಜನಪ್ಪ ಅವರ ಬೆಂಗಳೂರಿನ ಮನೆ ಮತ್ತು ಇತರ ಎರಡು ಕಡೆ ದಾಳಿ ನಡೆಸಿ, ಭಾರೀ ಮೊತ್ತದ ನಗದು,..
Published: 22nd January 2021 06:03 PM | Last Updated: 22nd January 2021 06:03 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಶುಕ್ರವಾರ ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಆಂಜನಪ್ಪ ಅವರ ಬೆಂಗಳೂರಿನ ಮನೆ ಮತ್ತು ಇತರ ಎರಡು ಕಡೆ ದಾಳಿ ನಡೆಸಿ, ಭಾರೀ ಮೊತ್ತದ ನಗದು, ಚಿನ್ನಾಭರಣ ಮತ್ತು ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಡಿವೈ ಎಸ್ ಪಿ ಪರಮೇಶ್ವರ ನೇತೃತ್ವದಲ್ಲಿ ನಗರದಲ್ಲಿ ನಡೆದ ದಾಳಿಯಲ್ಲಿ 3 ಲಕ್ಷ ರೂ. ನಗದು, ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
ದಾವಣಗೆರೆಯಲ್ಲಿ ಎಸ್ ಪಿ ಜಯಪ್ರಕಾಶ್ ನೇತೃತ್ವದ ತಂಡ 9.79 ಲಕ್ಷ ರೂ. ನಗದು, ಏಳು ಭೂ ದಾಖಲೆಗಳು, ನಾಲ್ಕು ವಾಹನಗಳು ಮತ್ತು ಮನೆಗಳ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದೆ.
ಅಂಜನಪ್ಪ ಆದಾಯದ ಮೂಲಕ್ಕಿಂತ ಹೆಚ್ಚಿನ ಸಂಪತ್ತು ಹೊಂದಿದ್ದಾರೆ ಎಂಬ ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಈ ದಾಳಿ ನಡೆಸಲಾಗಿದೆ. ಈ ಕುರಿತಂತೆ ಪ್ರಕರಣಗಳನ್ನು ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.