ಶಿವಮೊಗ್ಗ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವ: ಭಯಭೀತರಾಗಿ ಮನೆಯಿಂದ ಹೊರಬಂದ ಜನತೆ!
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಗುರುವಾರ ರಾತ್ರಿ ಭೂಮಿ ಕಂಪಿಸಿದ ಅನುಭವಾಗಿದ್ದು, ಭಯಭೀತರಾದ ಜನತೆ ಮನೆಯಿಂದ ಹೊರಬಂದ ಬಗ್ಗೆ ವರದಿಯಾಗಿದೆ.
Published: 22nd January 2021 12:12 AM | Last Updated: 22nd January 2021 12:12 AM | A+A A-

ಮನೆಯಿಂದ ಹೊರಗೆ ಬಂದ ಜನತೆ
ಶಿವಮೊಗ್ಗ: ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಗುರುವಾರ ರಾತ್ರಿ ಭೂಮಿ ಕಂಪಿಸಿದ ಅನುಭವಾಗಿದ್ದು, ಭಯಭೀತರಾದ ಜನತೆ ಮನೆಯಿಂದ ಹೊರಬಂದ ಬಗ್ಗೆ ವರದಿಯಾಗಿದೆ.
ರಾತ್ರಿ 10 ಗಂಟೆ ಸುಮಾರಿನಲ್ಲಿ ಆರರಿಂದ 10 ಸೆಕೆಂಡ್ ವರೆಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಆತಂಕದಿಂದ ಜನರು ಮನೆಯಿಂದ ಹೊರಬಂದಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಎನ್. ಆರ್. ಪುರ ತಾಲೂಕ್ ವ್ಯಾಪ್ತಿಯಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಮನೆಯ ಕಿಟಕಿ, ಪಾತ್ರೆಗಳು ನೆಲಕ್ಕುರುಳಿವೆ ಎಂದು ಜನರು ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಕೂಡಾ ಕೆಲ ಕಾಲ ಭೂಮಿ ಕಂಪಿಸಿದ ಅನುಭವಾದ ಬಗ್ಗೆ ಸ್ಥಳೀಯರು ಹೇಳಿಕೊಂಡಿದ್ದಾರೆ. ಆದರೆ, ಇದಕ್ಕೆ ಕಾರಣ ಏನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.