ಸಚಿವರ ಖಾತೆ ಬದಲಾವಣೆ ಮಾಡಿ ಸಿಎಂ ಬಿಎಸ್ ವೈ ಆದೇಶ
ಸಚಿವ ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ವೇಳೆ ಭುಗಿಲೆದ್ದಿದ್ದ ಅಸಮಾಧಾನ ಶಮನಗೊಳಿಸುವ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಚಿವರ ಖಾತೆ ಹಂಚಿಕೆಯಲ್ಲಿ ಸಣ್ಣ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
Published: 22nd January 2021 02:54 PM | Last Updated: 22nd January 2021 03:24 PM | A+A A-

ಸಿಎಂ ಯಡಿಯೂರಪ್ಪ(ಸಂಗ್ರಹ ಚಿತ್ರ)
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ವೇಳೆ ಭುಗಿಲೆದ್ದಿದ್ದ ಅಸಮಾಧಾನ ಶಮನಗೊಳಿಸುವ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಚಿವರ ಖಾತೆ ಹಂಚಿಕೆಯಲ್ಲಿ ಸಣ್ಣ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ನೂತನ ಆದೇಶದಂತೆ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಪೌರಾಳಿಡತ ಮತ್ತು ಸಕ್ಕರೆ ಖಾತೆಯ ಜವಾಬ್ದಾರಿ ನೀಡಲಾಗಿದ್ದು, ಸಚಿವ ಗೋಪಾಲಯ್ಯ ಅವರಿಗೆ ಅಬಕಾರಿ ಖಾತೆಯನ್ನು ನೀಡಲಾಗಿದೆ.
ಅಂತೆಯೇ ಸಚಿವ ಜೆಸಿ ಮಾಧುಸ್ವಾಮಿ ಅವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಜೊತೆ ಹಜ್ ಮತ್ತು ವಕ್ಫ್ ಇಲಾಖೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಇನ್ನು ಸಚಿವ ಕೆಸಿ ನಾರಾಯಣ ಗೌಡ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ನೀಡಲಾಗಿದ್ದು, ಅರವಿಂದ ಲಿಂಬಾವಳಿ ಅವರಿಗೆ ಅರಣ್ಯ ಇಲಾಖೆಯ ಜೊತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಸಚಿವ ಆರ್ ಶಂಕರ್ ಅವರಿಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಜವಾಬ್ದಾರಿ ನೀಡಲಾಗಿದೆ.
A day after portfolio allocation, @CMofKarnataka makes minor changes in portfolio allocation again. @ArvindLBJP also gets Kannada and Culture, Gopaliah gets Excise, MTB gets Muncipal administration & R Shankar gets horticulture & sericulture@NewIndianXpress @santwana99 pic.twitter.com/cKfL8kfCBt
— Ashwini M Sripad/ಅಶ್ವಿನಿ ಎಂ ಶ್ರೀಪಾದ್ (@AshwiniMS_TNIE) January 22, 2021