ಶಿವಮೊಗ್ಗ: ಭಾರಿ ಶಬ್ದದೊಂದಿಗೆ ಡೈನಾಮೆಟ್ ಸ್ಫೋಟ: 8 ಬಿಹಾರಿ ಕಾರ್ಮಿಕರ ದುರ್ಮರಣ
ಶಿವಮೊಗ್ಗದಿಂದ ನಾಲ್ಕು ಕಿಲೋ ಮೀಟರ್ ದೂರದಲ್ಲಿರುವ ಅಬ್ಬಲಗೆರೆ- ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೆಟ್ ಸ್ಪೋಟಿಸಿದ ಪರಿಣಾಮ ಬಿಹಾರ ಮೂಲದ 8 ಕಾರ್ಮಿಕರು ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
Published: 22nd January 2021 12:54 AM | Last Updated: 22nd January 2021 01:25 AM | A+A A-

ಗುರುತು ಸಿಗಲಾರದಷ್ಟು ಛಿದ್ರವಾಗಿರುವ ಮೃತದೇಹ (ಬಲಕ್ಕೆ)
ಶಿವಮೊಗ್ಗ: ಶಿವಮೊಗ್ಗದಿಂದ ನಾಲ್ಕು ಕಿಲೋ ಮೀಟರ್ ದೂರದಲ್ಲಿರುವ ಅಬ್ಬಲಗೆರೆ- ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೆಟ್ ಸ್ಪೋಟಿಸಿದ ಪರಿಣಾಮ ಬಿಹಾರ ಮೂಲದ 8 ಕಾರ್ಮಿಕರು ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೆಟ್ ಬಾಕ್ಸ್ ಗಳು ಸ್ಪೋಟಗೊಂಡು ಈ ಅನಾಹುತ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಬಿಹಾರಿ ಕಾರ್ಮಿಕರು ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ಸ್ಥಳದಲ್ಲಿದ್ದ ಯಾರೂಬ್ಬರು ಬದುಕುಳಿದಿರುವ ಸಾಧ್ಯತೆ ಇಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಭೂಮಿ ಕಂಪಿಸಿದ ಅನುಭವವಾದ ಸಮಯದಲ್ಲೇ ಈ ಘಟನೆ ನಡೆದಿದೆ. ಡೈನಾಮೆಟ್ ಸ್ಫೋಟದಿಂದಲೇ ಭೂಕಂಪನದ ಅನುಭವಾಗಿದೆ ಎಂದು ಹಲವು ಜನ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.