ಕೋವಿಡ್ ನಿಯಮಾವಳಿಗಳ ಅನುಸಾರವೇ ಶಶಿಕಲಾಗೆ ಚಿಕಿತ್ಸೆ: ವಿಕ್ಟೋರಿಯಾ ಆಸ್ಪತ್ರೆ
ಕೋವಿಡ್ ಸೋಂಕಿಗೆ ತುತ್ತಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುವ ವಿಕೆ ಶಶಿಕಲಾ ಅವರಿಗೆ ಕೋವಿಡ್-19 ನಿಯಮಾವಳಿಗಳ ಅನುಸಾರವೇ ಚಿಕಿತ್ಸೆ ನೀಡಲಾಗುತ್ತದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಮೂಲಗಳು ತಿಳಿಸಿವೆ.
Published: 22nd January 2021 11:18 AM | Last Updated: 22nd January 2021 01:02 PM | A+A A-

ಶಶಿಕಲಾ
ಬೆಂಗಳೂರು: ಕೋವಿಡ್ ಸೋಂಕಿಗೆ ತುತ್ತಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುವ ವಿಕೆ ಶಶಿಕಲಾ ಅವರಿಗೆ ಕೋವಿಡ್-19 ನಿಯಮಾವಳಿಗಳ ಅನುಸಾರವೇ ಚಿಕಿತ್ಸೆ ನೀಡಲಾಗುತ್ತದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ವಿಕ್ಟೋರಿಯಾ ಆಸ್ಪತ್ರೆ, ಶಶಿಕಲಾ ಅವರು, ಟೈಪ್ 2 ಡಯಾಬಿಟಿಸ್, ಅಧಿಕ ರಕ್ತದೊತ್ತಡ ಮತ್ತು ಹೈಪೋಥೈರಾಯ್ಡಿಸಮ್ ನೊಂದಿಗೆ ಕೊರೋನಾ ವೈರಸ್ ಸೋಂಕು, ತೀವ್ರತರವಾದ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ. ಪ್ರಸ್ತುತ ಶಶಿಕಲಾ ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯ ತುರ್ತು ಆರೈಕೆ ಕೇಂದ್ರದಲ್ಲಿ ಪ್ರಮಾಣಿತ ಕೋವಿಡ್ ನಿಯಮಗಳೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶಶಿಕಲಾ ಅವರಿಗೆ ಸಿಟಿ ಸ್ಕ್ಯಾನ್ ಮಾಡಲಾಗಿದ್ದು, ಈ ವರದಿಯಲ್ಲಿ ಅವರಿಗೆ ಶ್ವಾಸಕೋಶದಲ್ಲಿ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ. ಅಧಿಕ ರಕ್ತ ದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಶಶಿಕಲಾ ಎದುರಿಸುತ್ತಿದ್ದಾರೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯ ಅಧೀಕ್ಷಕ ಡಾ. ರಮೇಶ್ ಕೃಷ್ಣನ್ ತಿಳಿಸಿದ್ದಾರೆ.
ಅಕ್ರಮ ಹಣ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಶಶಿಕಲಾ ಇದೇ ತಿಂಗಳು 27 ರಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಆದರೆ, ಇದೀಗ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ಜೈಲಿನಿಂದ ಬಿಡುಗಡೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.