ಶಿವಮೊಗ್ಗ ಸ್ಫೋಟ ಪ್ರಕರಣ: ಮೂವರು ಆರೋಪಿಗಳ ಬಂಧನ, ನಾಳೆ ಘಟನಾ ಸ್ಥಳಕ್ಕೆ ಸಿಎಂ ಭೇಟಿ

ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಸ್ಫೋಟ ಅವಘಡದಲ್ಲಿ 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಘಟನೆ ಸಂಬಂಧ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

Published: 22nd January 2021 09:44 AM  |   Last Updated: 22nd January 2021 12:57 PM   |  A+A-


shivmogga

ಘಟನಾ ಸ್ಥಳದಲ್ಲಿ ಪೊಲೀಸರು

Posted By : Manjula VN
Source : UNI

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಸ್ಫೋಟ ಅವಘಡದಲ್ಲಿ 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಘಟನೆ ಸಂಬಂಧ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಪ್ರಕರಣ ಸಂಬಂಧ ಗುತ್ತಿಗೆದಾರ ಸುಧಾಕರ್, ಕಲ್ಲು ಗಣಿಗಾರಿಕೆಗೆ ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ನರಸಿಂಹ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಜಮೀನಿನ ಮಾಲೀಕ ಅವಿನಾಶ್ ಎಂಬುವವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. 

ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರೀ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.

ಲಾರಿಯೊಂದಕ್ಕೆ ತುಂಬಿದ್ದ ಜೆಲಿಟಿನ್ ಸ್ಫೋಟಗೊಂಡು ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಲಾರಿಯಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳಲ್ಲಿ, ಬಹುತೇಕ ಜಿಲ್ಲೆಟಿನ್ ಕಡ್ಡಿಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಲಾರಿ ಛಿದ್ರ ಛಿದ್ರಗೊಂಡಿದೆ ಎಂದು ತಿಳಿದುಬಂದಿದೆ, 

ಲಾರಿಯಲ್ಲಿದ್ದ ಬಿಹಾರ ಮೂಲದ 8ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಲಾರಿ ಚಾಲಕ, ಕಾರ್ಮಿಕರು ಸೇರಿದಂತೆ 8ಕ್ಕೂ ಹೆಚ್ಚು ಕಾರ್ಮಿಕರ ಮೃತದೇಹವೂ ಒಂದೊಂದು ದಿಕ್ಕಿನಲ್ಲಿ ಛಿದ್ರ ಛಿದ್ರವಾಗಿ ಬಿದ್ದಿವೆ. ಸ್ಫೋಟದ ತೀವ್ರತೆ ಹೇಗಿತ್ತು ಎಂದರೆ, ದುರಂತದಲ್ಲಿ ಮೃತಪಟ್ಟಿರೋ ಅದೆಷ್ಟೋ ಕಾರ್ಮಿಕರ ಮೃತದೇಹ ಗುರುತೇ ಸಿಗದಷ್ಟು ಛಿದ್ರ ಛಿದ್ರವಾಗಿದೆ.

ಈ ನಡುವೆ ಸುದ್ದಿ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಘಟನಾ ಸ್ಥಳಕ್ಕೆ ಆಗಮಿಸಿದ್ದು ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿ ಪರಿಶೀಲನೆ ನಡೆಸುತ್ತಿದ್ದಾರೆ. 

ಇದರ ಬೆನ್ನಲ್ಲೇ ಮೂರಕ್ಕೂ ಹೆಚ್ಚು ಆ್ಯಂಬುಲೆನ್ಸ್ ದೌಡಾಯಿಸಿದ್ದು. ಇನ್ನು ಪೊಲೀಸರು ಛಿದ್ರ ಛಿದ್ರವಾಗಿ ಬಿದ್ದಿದ್ದ ಮೃತದೇಹಗಳ ಶೋಧಕಾರ್ಯದಲ್ಲಿ ತೊಡಗಿದ್ದಾರೆ. 

ಘಟನಾ ಸ್ಥಳದಲ್ಲಿ ಕತ್ತಲು ಆವರಿಸಿದ್ದ ಕಾರಣ ಶೋಧಕಾರ್ಯ ನಿಧಾನವಾಗಿ ಸಾಗಿತ್ತು. ಪತ್ತೆಯಾದ ರಕ್ತಸಿಕ್ತ ನಾಲ್ವರ ಮೃತದೇಹಗಳನ್ನ ಆ್ಯಂಬುಲೆನ್ಸ್‌ಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಉಳಿದ ಮೃತದೇಹಗಳಿಗೆ ತಡರಾತ್ರಿವರೆಗೂ ಶೋಧಕಾರ್ಯ ಮುಂದುವರೆದಿತ್ತು.

ಘಟನೆ ಸಂಬಂಧ ಇದೀಗ ಚಿತ್ರದುರ್ಗ, ದಾವಣಗೆರೆಯಿಂದ ಎಎಸ್'ಸಿ ವಿಶೇಷ ತಂಡ ಹಾಗೂ ಶ್ವಾನದಳಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. 

ಈ ನಡುವೆ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಹಾಗೂ ಇತರೆ ನಾಯಕರು ಭೇಟಿ ನೀಡುತ್ತಿದ್ದು, ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಈ ನಡುವೆ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ಭೇಟಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ. 


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp