ಶಿವಮೊಗ್ಗ ಸ್ಫೋಟ: ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಖಚಿತ ಎಂದ ಸಚಿವ ಮುರುಗೇಶ್ ನಿರಾಣಿ

ಶಿವಮೊಗ್ಗ ಜಿಲ್ಲೆಯ ಹುಣಸೋಡು ನಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗಣಿಗಾರಿಕೆ ಸಚಿವ ಮುರುಗೇಶ್ ನಿರಾಣಿ  ಹೇಳಿದ್ದಾರೆ.

Published: 22nd January 2021 12:20 PM  |   Last Updated: 22nd January 2021 01:05 PM   |  A+A-


Murugesh nirani

ಸಚಿವ ಮುರುಗೇಶ್ ನಿರಾಣಿ

Posted By : Srinivasamurthy VN
Source : The New Indian Express

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹುಣಸೋಡು ನಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗಣಿಗಾರಿಕೆ ಸಚಿವ ಮುರುಗೇಶ್ ನಿರಾಣಿ  ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಅಕ್ರಮ ಕಲ್ಲುಕ್ವಾರಿಯಲ್ಲಿ ತೊಡಗಿಸಿಕೊಂಡವರು ಎಷ್ಟೇ ಪ್ರಭಾವಿಗಳಗಾಗಿದ್ದರೂ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಇದರಲ್ಲಿ ಯಾವುದೇ ಮುಲಾಜಿಗೆ ಒಳಗಾಗುವುದಿಲ್ಲ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಖಚಿತ‌ ಎಂದು ನಿರಾಣಿ ಹೇಳಿದ್ದಾರೆ.

'ಕಳೆದ ರಾತ್ರಿ ಶಿವಮೊಗ್ಗದ ಅಬ್ಬಲಗೆರೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ಜಿಲಿಟಿನ್ ಕಡ್ಡಿಗಳ ಸ್ಫೋಟದಿಂದ ಅನೇಕ ಕಾರ್ಮಿಕರು ಸಾವು ಕಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಕುಟಂಬದವರಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ಈ ದುರ್ಘಟನೆಯಲ್ಲಿ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ಹಾಗೂ ಗಾಯಗೊಂಡವರಿಗೆ ಸರ್ಕಾರದ ವತಿಯಿಂದ ಅಗತ್ಯ ನೆರವು ನೀಡಲು ಸರ್ಕಾರ ಸಿದ್ದವಿದೆ. ಕಳೆದ ರಾತ್ರಿಯಿಂದಲೇ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು,ಘಟನಾ ಸ್ಥಳಕ್ಕೆ ತೆರಳಿ ಪರಿಹಾರ ಕಾರ್ಯದಲ್ಲಿ ತೊಡಗಿಸಲು ಸೂಚನೆ ಕೊಡಲಾಗಿದೆ ಎಂದು ಹೇಳಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp