'ದುರ್ಯೋಧನನ ಆಡಳಿತ' ಎಂಬುದನ್ನು ಬಿಜೆಪಿ ಸರ್ಕಾರ ಸಾಬೀತುಪಡಿಸಿದೆ: ಸಿದ್ದರಾಮಯ್ಯ

ಕೇಂದ್ರ ಬಿಜೆಪಿ ಸರ್ಕಾರವನ್ನು ಟೀಕಿಸಿದ ಹಿನ್ನೆಲೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

Published: 23rd January 2021 09:28 AM  |   Last Updated: 23rd January 2021 09:28 AM   |  A+A-


siddaramaiah

ಸಿದ್ದರಾಮಯ್ಯ

Posted By : Shilpa D
Source : Online Desk

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರವನ್ನು ಟೀಕಿಸಿದ ಹಿನ್ನೆಲೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ ಪೊಲೀಸರ ಕೃತ್ಯ ಖಂಡನೀಯ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರ ತಮ್ಮದು 'ದುರ್ಯೋದನ ಸರ್ಕಾರ' ಎಂದು ಸಾಬೀತುಪಡಿಸಿದೆ ಎಂದು ಟೀಕಿಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಹೊರಟಿರುವ ಬಿ.ಎಸ್.ಯಡಿಯೂರಪ್ಪ ಅವರ ಗೋಮುಖವ್ಯಾಘ್ರ ಮುಖ ಬಯಲಾಗಿದೆ .

ಜನವರಿ 17ರಂದು ನಗರದಲ್ಲಿ ನಡೆದ ತಾಲ್ಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ್ದ ನಾಗರಾಜಯ್ಯ, ಕೇಂದ್ರ ಸರ್ಕಾರವನ್ನು ದುರ್ಯೋಧನ, ಗೋಮುಖ ವ್ಯಾಘ್ರಕ್ಕೆ ಹೋಲಿಕೆ ಮಾಡಿದ್ದರು. ಅವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ಕಾರ್ಯಕರ್ತರು ಪಶ್ಚಿಮ ಠಾಣೆಗೆ ದೂರು ಸಲ್ಲಿಸಿದ್ದರು. 

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp