ಪ್ರಶ್ನೆ ಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಎಫ್ ಡಿಎ ಪರೀಕ್ಷೆ ಮುಂದೂಡಿಕೆ: ಕೆಪಿಎಸ್‌ಸಿ

ನಾಳೆ ನಡೆಯಬೇಕಿದ್ದ ಎಫ್ ಡಿಎ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Published: 23rd January 2021 08:31 PM  |   Last Updated: 23rd January 2021 08:32 PM   |  A+A-


KPSC

ಕೆಪಿಎಸ್‌ಸಿ

Posted By : Srinivasamurthy VN
Source : Online Desk

ಬೆಂಗಳೂರು: ನಾಳೆ ನಡೆಯಬೇಕಿದ್ದ ಎಫ್ ಡಿಎ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕಾರ್ಯದರ್ಶಿ ಜಿ. ಸತ್ಯವತಿ ಅವರು ಮಾಹಿತಿ ನೀಡಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ನಾಳೆ ನಡೆಯಬೇಕಿದ್ದ ಎಫ್ ಡಿಎ (ಪ್ರಥಮ ದರ್ಜೆ ಸಹಾಯಕ) ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಪರೀಕ್ಷಾ ದಿನಾಂಕವನ್ನು ನಿಗದಿ ಘೋಷಣೆ ಮಾಡುತ್ತೇವೆ ಎಂದೂ ಸತ್ಯವತಿ ಅವರು ಮಾಹಿತಿ ನೀಡಿದ್ದಾರೆ.

100%

Stay up to date on all the latest ರಾಜ್ಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp