ಪ್ರಧಾನಿ ಮೋದಿ ವಿರುದ್ಧ ಟೀಕೆ: ಸಾಹಿತಿ ಹಂ.ಪ. ನಾಗರಾಜಯ್ಯ ವಿಚಾರಣೆ ನಡೆಸಿದ ಪೊಲೀಸರು

ಪ್ರಧಾನಮಂತ್ರಿ ನರೇಂದ್ರ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆಂಬ ಆರೋಪ ಮೇಲೆ ಸಾಹಿರಿ ಹಂ.ಪ.ನಾಗರಾಜ್ ಅವರನ್ನು ನಗರದ ಪಶ್ಚಿಮ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆಂದು ತಿಳಿದುಬಂದಿದೆ.

Published: 23rd January 2021 08:24 AM  |   Last Updated: 23rd January 2021 08:24 AM   |  A+A-


Hampana

ಹಂ.ಪ.ನಾಗರಾಜ್ 

Posted By : Manjula VN
Source : The New Indian Express

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆಂಬ ಆರೋಪ ಮೇಲೆ ಸಾಹಿರಿ ಹಂ.ಪ.ನಾಗರಾಜ್ ಅವರನ್ನು ನಗರದ ಪಶ್ಚಿಮ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆಂದು ತಿಳಿದುಬಂದಿದೆ. 

ಜ.17ರಂದು ನಗರದಲ್ಲಿ ನಡೆದ ತಾಲ್ಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ್ದ ನಾಗರಾಜಯ್ಯ, ಕೇಂದ್ರ ಸರ್ಕಾರವನ್ನು ದುರ್ಯೋಧನ, ಗೋಮುಖ ವ್ಯಾಘ್ರಕ್ಕೆ ಹೋಲಿಕೆ ಮಾಡಿದ್ದರು. ಅವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ಕಾರ್ಯಕರ್ತರು ಪಶ್ಚಿಮ ಠಾಣೆಗೆ ದೂರು ಸಲ್ಲಿಸಿದ್ದರು. 

ದೂರಿನ ಆಧಾರದ ಮೇಲೆ ಹಂ.ಪ.ನಾ ಅವರಿಗೆ ಪೊಲೀಸರು ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಇದರಂತೆ ನಾಗರಾಜಯ್ಯ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿ, ಹೇಳಿಕೆ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. 

ಪ್ರಕರಣ ಸಂಬಂಧ ಈ ವರೆಗೂ ಯಾವುದೇ ಎಫ್ಐಆರ್ ಗಳೂ ದಾಖಲಾಗಿಲ್ಲ. ಆದರೆ, ವಿಚಾರಣೆಗೊಳಪಡಿಸಿರುವುದನ್ನು ಇತರೆ ಸಾಹಿತಿಗಳು ಹಾಗೂ ಚಿಂತಕರು ತೀವ್ರವಾಗಿ ಖಂಡಿಸಿದ್ದಾರೆ. 

ವಿಚಾರಣೆ ಸಂಬಂಧ ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ. 

ಕೇಂದ್ರ ಸರಕಾರವನ್ನು ಟೀಕಿಸಿದರು ಎಂಬ ಏಕೈಕ ಕಾರಣಕ್ಕಾಗಿ ಹಂಪನಾ ಅವರನ್ನು ಮಂಡ್ಯ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಹಾಗೂ ಕೀಚಕ ನಡೆಯ ಪ್ರತೀಕ ಎಂದು ಟೀಕಿಸಿದ್ದಾರೆ. 

ಹಂಪನಾ ಅವರು ಈ ನಾಡು ಕಂಡ ಶ್ರೇಷ್ಠ ಭಾಷಾ ವಿಜ್ಞಾನಿ, ಸಂಶೋಧಕ ಹಾಗೂ ಎಲ್ಲಕ್ಕೂ ಮಿಗಿಲಾಗಿ ಚಿಂತಕ. ಅಂತಹವರ ಧ್ವನಿ ಅಡಗಿಸಲು ರಾಜ್ಯ ಸರಕಾರ ಮುಂದಾದದ್ದು ನಾಚಿಕೆಗೇಡಿನ ಸಂಗತಿ. ತಮ್ಮ ವಿರುದ್ಧ ಧ್ವನಿ ಎತ್ತುವ ರಾಜಕೀಯ ವಿರೋಧಿಗಳ ವಿರುದ್ಧ ಹಗೆತನ ಸಾಧಿಸುವ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಇದೀಗ ಸಾಹಿತಿಗಳನ್ನೂ ಆ ಪಟ್ಟಿಗೆ ಸೇರಿಸಿಕೊಂಡಿರುವುದು ದುರಂತದ ಸಂಗತಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 

ಅದು ಯಾವುದೇ ಸರಕಾರವಿರಲಿ, ಅದರ ಜನವಿರೋಧಿ ನಡೆಯನ್ನು ಟೀಕಿಸುವ, ತಿದ್ದುವ, ತೀಡುವ ಹಕ್ಕನ್ನು ಈ ದೇಶದ ಪ್ರಜಾತಂತ್ರ ವ್ಯವಸ್ಥೆ, ಸಂವಿಧಾನ ಕಲ್ಪಿಸಿದೆ. ಆದರೆ ಸರಕಾರಗಳು ತಮಗಿರುವ ಅಧಿಕಾರ ದುರ್ಬಳಕೆ ಮಾಡಿಕೊಂಡು, ಪೊಲೀಸ್ ಬಲದ ಮೂಲಕ ಸಾಹಿತಿಗಳು, ಬುದ್ಧಿಜೀವಿಗಳು, ಪ್ರಜ್ಞಾವಂತರ ಧ್ವನಿ ಅಡಗಿಸಲು ಹೊರಟಿರುವುದು ಖಂಡನೀಯ. ಸರಕಾರ ತನ್ನ ಈ ವಕ್ರನಡೆಯನ್ನು ತಿದ್ದಿಕೊಳ್ಳದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp