ಗಡಿಯಲ್ಲಿ ಎಂಇಎಸ್ ಪುಂಡಾಟ ಖಂಡಿಸಿ ಪ್ರತಿಭಟನೆ: ಕನ್ನಡ ಹೋರಾಟಗಾರರ ಪೊಲೀಸ್ ವಶಕ್ಕೆ

ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಮಹಾರಾಷ್ಟ್ರದ ಶಿವಸೇನೆ ಪುಂಡರು ನಡೆಸಿದ ಪುಂಡಾಟಿಕೆ ಖಂಡಿಸಿ ನಗರದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಶುಕ್ರವಾರ ರಾಜ್ಯದ ನಾನಾ ಜಿಲ್ಲಗಳಿಂಗ ಆಗಮಿಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

Published: 23rd January 2021 07:31 AM  |   Last Updated: 23rd January 2021 12:45 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಮಹಾರಾಷ್ಟ್ರದ ಶಿವಸೇನೆ ಪುಂಡರು ನಡೆಸಿದ ಪುಂಡಾಟಿಕೆ ಖಂಡಿಸಿ ನಗರದ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಶುಕ್ರವಾರ ರಾಜ್ಯದ ನಾನಾ ಜಿಲ್ಲಗಳಿಂಗ ಆಗಮಿಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಮಹಾರಾಷ್ಟ್ರ ಸಿಎಂಂ ಉದ್ಧವ್ ಠಾಕ್ರೆ ಮತ್ತು ಶಿವಸೇನೆ ಮುಖಂಡರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಬೆಳಗಾವಿ ನಮ್ಮದೇ ಎಂದು ಘೋಷಣೆ ಕೂಗಿದರು. ಈ ವೇಳೆ ಮಹಾರಾಷ್ಟ್ರದ ಗಡಿ ಗ್ರಾಮ ಶಿನೋಳಿಯಲ್ಲಿ ಕನ್ನಡ ಧ್ವಜ ಹಾರಿಸಲು ತೆರಳಲು ಕನ್ನಡ ಹೋರಾಟಗಾರರು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು. 

ರಾಜ್ಯದ ನಾನಾ ಭಾಗಗಳಿಂದ 345ಕ್ಕೂ ಹೆಚ್ಚು ವಾಹನಗಳಲ್ಲಿ ಬೆಳಗಾವಿಗೆ ಆಗಮಿಸುತ್ತಿದ್ದ ವೇಳೆ ಹಿರೇಬಾಗೇವಾಡಿ ಟೋಲ್ ನಾಕಾ ಬಳಿ ಪೊಲೀಸರು ಕನ್ನಡ ಹೋರಾಟಗಾರರನ್ನು ತಡೆದರು. ಬೆಳಗಾವಿ ಪ್ರವೇಶಕ್ಕೆ ಅನುಮತಿ ನಿರಾಕರಿಸಿರುವುಪದರಿಂದ ಕನ್ನಡ ಹೋರಾಟಗಾರರು ರಾಷ್ಟ್ರೀಯ ಹೆದ್ದಾರಿ ತಡೆಯಲು ಮುಂದಾದರು. 

ರಸ್ತೆಯಲ್ಲೇ ಉರುಳು ಸೇವೆ ಮಾಡಿದರು. ಬಳಿಕ ಬೆಳಗಾವಿಯ ಚನ್ನಮ್ಮ ವೃತ್ತದವರೆಗೆ ತೆರಳಲು ಪೊಲೀಸರು ಅನುಮತಿ ನೀಡಿದರು. ಹಿರೇಬಾಗೇವಾಡಿಯಿಂದ ಪೊಲೀಸ್ ಭದ್ರತೆಯಲ್ಲೇ ಆಗಮಿಸಿದ ಕನ್ನಡ ಹೋರಾಟಗಾರರು ಪ್ರತಿಭಟನೆ ನಡೆಸಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಶಿವಸೇನೆ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ತಂಟೆಗೆ ಬಂದರೆ ನಾವು ಸುಮ್ಮನಿರುವುದಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದರು. 


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp