ಬೆಳಗಾವಿ: ಗಡಿಯಲ್ಲಿ ಪುಂಡಾಟ ನಡೆಸಿದ 8 ಮಂದಿ ಶಿವಸೇನೆ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಬೆಳಗಾವಿ ಮಹಾನಗರ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವುಗೊಳಿಸಬೇಕೆಂದು ಪ್ರತಿಭಟನೆಗೆ ಯತ್ನಿಸಿ ಗಡಿಯಲ್ಲಿ ಪುಂಡಾಟ ನಡೆಸಿದ್ದ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರ ವಿರುದ್ಧ ಬೆಳಗಾವಿ ಪೋಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Published: 23rd January 2021 12:17 PM  |   Last Updated: 23rd January 2021 12:53 PM   |  A+A-


ಸಂಗ್ರಹ ಚಿತ್ರ

Posted By : Raghavendra Adiga
Source : Online Desk

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವುಗೊಳಿಸಬೇಕೆಂದು ಪ್ರತಿಭಟನೆಗೆ ಯತ್ನಿಸಿ ಗಡಿಯಲ್ಲಿ ಪುಂಡಾಟ ನಡೆಸಿದ್ದ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರ ವಿರುದ್ಧ ಬೆಳಗಾವಿ ಪೋಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಬೆಳಗಾವಿ ಗಡಿ ವಿವಾದವನ್ನೆತ್ತಿಉದ್ಧಟತನ ಮೆರೆದಿದ್ದ ಶಿವಸೇನೆ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕೊಲ್ಲಾಪುರ ಜಿಲ್ಲೆ ಶಿವಸೇನೆ ಅಧ್ಯಕ್ಷ ವಿಜಯ್ ದೇವಣೆ ಸೇರಿದಂತೆ ಎಂಟು ಮಂದಿಯ ವಿರುದ್ಧ ಬೆಳಗಾವಿಯ  ಕಾಕತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಬೆಳಗಾವಿ ಪಾಲಿಕೆ ಎದುರು ಹಾರಿಸಲಾಗಿರುವ ಕನ್ನಡ ಧ್ವಜ ಹಾಗೂ ಧ್ವಜಸ್ತಂಭವನ್ನು ಕೂಡಲೇ ತೆಗೆದುಹಾಕುವಂತೆ ಒತ್ತಾಯಿಸಿ ಮಹಾರಾಷ್ಟ್ರ ಏಕಿಕರಣ ಸಮಿತಿ (ಎಂಇಎಸ್) ಮತ್ತು ಶಿವಸೇನೆ ಕಾರ್ಯಕರ್ತರು ಗುರುವಾರ ಬೆಳಗಾವಿ ನಗರ ಪಾಲಿಕೆ (ಬಿಸಿಸಿ) ಆವರಣದಲ್ಲಿ ಪ್ರತಿಭಟನೆ ನಡೆಸಲು ಯತ್ನಿಸಿದ್ದರು. 


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp