ಶಶಿಕಲಾ ಆರೋಗ್ಯ ಸ್ಥಿರವಾಗಿದ್ದು, ಖಾಸಗಿ ಆಸ್ಪತ್ರೆಗೆ ಸ್ಥಳಾಂತರವಿಲ್ಲ: ಅಧಿಕಾರಿಗಳ ಸ್ಪಷ್ಟನೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಅವರ  ಆರೋಗ್ಯ ಸ್ಥಿರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

Published: 23rd January 2021 10:38 AM  |   Last Updated: 23rd January 2021 12:49 PM   |  A+A-


Sasikala

ಶಶಿಕಲಾ

Posted By : Manjula VN
Source : The New Indian Express

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಅವರ  ಆರೋಗ್ಯ ಸ್ಥಿರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಶುಕ್ರವಾರ ಸಂಜೆ ಶಶಿಕಲಾ ಆರೋಗ್ಯ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಬಿಎಂಸಿಆರ್'ಐ, ಶಶಿಕಲಾ ಅವರ ಆರೋಗ್ಯ ಸ್ಥಿರವಾಗಿದೆ. ಪ್ರಜ್ಞಾವಸ್ಥೆಯಲ್ಲೇ ಇದ್ದಾರೆ. ಉಸಿರಾಟ ಸಮಸ್ಯೆ ಸ್ವಲ್ಪ ಮಟ್ಟಿಗೆ ಬಗೆಹರಿದಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ರಕ್ತದೊತ್ತಡ ಸಮಸ್ಯೆಯು ಸಾಧಾರಣ ಸ್ಥಿತಿಗೆ ಬಂದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. 

ಶಶಿಕಲಾ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂಬ ವದಂತಿಗಳು ಹಬ್ಬಿದ್ದವು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಮೂಲಗಳು, ಶಶಿಕಲಾ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸಾಧ್ಯವಿಲ್ಲ. ಖಾಸಗಿ ಆಸ್ಪತ್ರೆಗೆ ದಾಖಲಾಗಲು ಶಶಿಕಲಾ ಅವರು ನ್ಯಾಯಾಲಯದಿಂದ ಅನುಮತಿ ಪಡೆಯಬೇಕಿದೆ ಎಂದು ತಿಳಿಸಿದೆ. 

ಈ ನಡುವೆ ಅಧಿಕಾರಿಗಳು ಖಾಸಗಿ ಆಸ್ಪತ್ರೆಗೆ ದಾಖಲಾತಿಗೆ ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿ ಶಶಿಕಲಾ ಅವರ ಕುಟುಂಬಸ್ಥರು ಹಾಗೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ನಡುವೆ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿಗಳು ಕೊರೋನಾ ನಿಯಮಗಳು ಉಲ್ಲಂಘನೆಯಾಗಿರುವುದರ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. 

ಶಶಿಕಲಾ ಅವರನ್ನು ತುರ್ತುನಿಗಾ ಘಟಕಕ್ಕೆ ಕರೆತರಲಾಗಿತ್ತು. ಇದೇ ವಾರ್ಡ್ ಗಳಲ್ಲಿ ಸಾರಿ ಯಿಂದ ಬಳಲುತ್ತಿರುವ ಕೈದಿಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಶಶಿಕಲಾ ಬಂದ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿಗಳನ್ನು ಅನುಸರಿಸಿರಲಿಲ್ಲ ಎಂದು ಸಿಬ್ಬಂದಿಗಳು ಆತಂಕ ವ್ಯಕ್ತಪಡಿಸಿದ್ದಾರೆ. 

ಗಂಟೆಗಳ ಕಾಲ ತುರ್ತುನಿಗಾ ಘಟಕದಲ್ಲಿಯೇ ಇಲ್ಲದು, ನಂತರ ಅವರನ್ನು ಕೋವಿಡೇತರ ಐಸಿಯು, ರೇಡಿಯೋಲಜಿ ಘಟಕ ಹಾಗೂ ಇತರೆ ಘಟಕಗಳಿಗೆ ಕರೆದೊಯ್ಯಲಾಗಿತ್ತು. ಸಾಮಾನ್ಯವಾಗಿ ಲಕ್ಷಣಗಳು ಕಂಡುಬಂದ ರೋಗಿಗಳನ್ನು ವರದಿ ಬರುವವರೆಗೂ ಕೊರೋನಾ ಸೋಂಕಿತರಿಗೆ ನೀಡುವ ಚಿಕಿತ್ಸೆಯಂತೆಯೇ ನೀಡಬೇಕಾಗುತ್ತದೆ. ಆದರೆ, ಶಶಿಕಲಾ ಅವರನ್ನು ನೇರವಾಗಿ ಮುಟ್ಟಿ ಕೋವಿಡೇತರ ರೋಗಿಗಳಿಗೆ ಪರಿಶೀಲಿಸುವಂತೆ ಪರಿಶೀಲಿಸಲಾಗಿದ್ದು, ವಿದ್ಯಾರ್ಥಿಗಳನ್ನೂ ಕರೆಸಲಾಗಿತ್ತು. ಇದು ಸುರಕ್ಷಿತವಾದುದಲ್ಲ. ಇತರ ನಡವಳಿಕೆಗಳನ್ನು ಒಪ್ಪಲು ಸಾಧ್ಯವಿಲ್ಲ. ಪ್ರತೀ ಆರೋಗ್ಯ ಕಾರ್ಯಕರ್ತನ ಜೀವವನ್ನು ಅಪಾಯಕ್ಕೆ ಸಿಲುಕಿಸಿದಂತಾಗಿದೆ ಎಂದು ವೈದ್ಯರು ಕಿಡಿಕಾರಿದ್ದಾರೆ. ಸಾರಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕೋವಿಡೇತರ ಪ್ರದೇಶದಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಬೇಕಿದೆ ಎಂದು ಆಗ್ರಹಿಸಿದ್ದಾರೆ. 

ಶಶಿಕಲಾ ಅವರನ್ನು ಬೌರಿಂಗ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆಯಲ್ಲಿ ಶಶಿಕಲಾ ಅವರಿಗೆ ಆರ್'ಎಟಿ ಹಾಗೂ ಆರ್'ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೋನಾ ಇಲ್ಲ ಎಂದು ಹೇಳಲಾಗಿತ್ತು. ಪರೀಕ್ಷೆ ಬಳಿಕ ಶಶಿಕಲಾ ಅವರಲ್ಲಿ ತೀವ್ರ ಉಸಿರಾಟ ಸಮಸ್ಯೆ ಎದುರಾಗಿತ್ತು ಬಳಿಕ ಮತ್ತೆ ಆರ್'ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು, ಕೊರೋನಾ ಇರುವುದು ದೃಢಪಟ್ಟಿತ್ತು ಎಂದು ವರದಿಗಳು ತಿಳಿಸಿವೆ. 

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp