ಶಿವಮೊಗ್ಗ: ಸೌಂದರ್ಯವರ್ಧಕ ತಯಾರಿಕಾ ಕಟ್ಟಡದಲ್ಲಿ ಭಾರೀ ಬೆಂಕಿ, ಲಕ್ಷಾಂತರ ರೂಪಾಯಿ ನಷ್ಟ

ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಜಿಲೆಟಿನ್‍ ಕಡ್ಡಿ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ ಘಟನೆಯ ದಿಗ್ಭ್ರಮೆಯಿಂದ ಜನರು ಹೊರಬರುವ ಮುನ್ನವೇ ಇಲ್ಲಿನ ಜನನಿಬಿಡ ಗಾಂಧಿ ಬಜಾರ್ ಪ್ರದೇಶದ ಸೌಂದರ್ಯವರ್ಧಕ ತಯಾರಿಕಾ ಘಟಕದಲ್ಲಿ ಶನಿವಾರ ರಾತ್ರಿ ಭಾರೀ ಬೆಂಕಿ ಕಾಣಿಸಿಕೊಂಡಿದೆ.

Published: 24th January 2021 11:12 AM  |   Last Updated: 24th January 2021 12:48 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : Online Desk

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಜಿಲೆಟಿನ್‍ ಕಡ್ಡಿ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ ಘಟನೆಯ ದಿಗ್ಭ್ರಮೆಯಿಂದ ಜನರು ಹೊರಬರುವ ಮುನ್ನವೇ ಇಲ್ಲಿನ ಜನನಿಬಿಡ ಗಾಂಧಿ ಬಜಾರ್ ಪ್ರದೇಶದ ಸೌಂದರ್ಯವರ್ಧಕ ತಯಾರಿಕಾ ಘಟಕದಲ್ಲಿ ಶನಿವಾರ ರಾತ್ರಿ ಭಾರೀ ಬೆಂಕಿ ಕಾಣಿಸಿಕೊಂಡಿದೆ.

ಘಟನೆಯಲ್ಲಿ ಪ್ರಾಣಹಾನಿ ಬಗ್ಗೆ ಯಾವುದೇ ವರದಿಯಾಗಿಲ್ಲ. ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಜ್ವಾಲೆಯನ್ನು ನಂದಿಸಿದ್ದಾರೆ. ಎರಡು ಅಂತಸ್ತಿನ ಕಟ್ಟಡದಲ್ಲಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸೌಂದರ್ಯವರ್ಧಕ ವಸ್ತುಗಳನ್ನು ಬೆಂಕಿಯಲ್ಲಿ ಸುಟ್ಟು ಹೋಗಿವೆ.

ಬೆಂಕಿಯಿಂದ ಅಕ್ಕಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ನಷ್ಟವನ್ನು ಇನ್ನೂ ಅಂದಾಜು ಮಾಡಿಲ್ಲ. ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Stay up to date on all the latest ರಾಜ್ಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp