ಹೆಣ್ಣುಮಕ್ಕಳ ಪ್ರತಿಭೆ ಗುರ್ತಿಸಿ, ನಮ್ಮ ಶ್ರೇಷ್ಠ ಸಂಸ್ಕೃತಿ, ಮಾನವ ಧರ್ಮವನ್ನು ಎತ್ತಿ ಹಿಡಿಯೋಣ: ಸಿಎಂ ಯಡಿಯೂರಪ್ಪ
ಹೆಣ್ಣುಮಕ್ಕಳ ಪ್ರತಿಭೆಯನ್ನು ಗುರುತಿಸಿ, ಸಾಧನೆಗೆ ಸಮಾನ ಅವಕಾಶ ಕಲ್ಪಿಸುವ ನಮ್ಮ ಶ್ರೇಷ್ಠ ಸಂಸ್ಕೃತಿ ಹಾಗೂ ಮಾನವ ಧರ್ಮವನ್ನು ಎತ್ತಿ ಹಿಡಿಯೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ.
Published: 24th January 2021 12:13 PM | Last Updated: 24th January 2021 12:59 PM | A+A A-

ಯಡಿಯೂರಪ್ಪ
ಬೆಂಗಳೂರು: ಹೆಣ್ಣುಮಕ್ಕಳ ಪ್ರತಿಭೆಯನ್ನು ಗುರುತಿಸಿ, ಸಾಧನೆಗೆ ಸಮಾನ ಅವಕಾಶ ಕಲ್ಪಿಸುವ ನಮ್ಮ ಶ್ರೇಷ್ಠ ಸಂಸ್ಕೃತಿ ಹಾಗೂ ಮಾನವ ಧರ್ಮವನ್ನು ಎತ್ತಿ ಹಿಡಿಯೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ.
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಹೆಣ್ಣುಮಕ್ಕಳ ಪ್ರತಿಭೆಯನ್ನು ಗುರುತಿಸಿ, ಸಾಧನೆಗೆ ಸಮಾನ ಅವಕಾಶ ಕಲ್ಪಿಸುವ ನಮ್ಮ ಶ್ರೇಷ್ಠ ಸಂಸ್ಕೃತಿ ಹಾಗೂ ಮಾನವ ಧರ್ಮವನ್ನು ಎತ್ತಿ ಹಿಡಿಯೋಣ. ಹೆಣ್ಣುಮಕ್ಕಳಿಗೆ ಶಿಕ್ಷಣ, ರಕ್ಷಣೆ, ತಾರತಮ್ಯರಹಿತ ಬಲಿಷ್ಠ ಸಮಾಜವನ್ನು ಕಟ್ಟುವ ದೃಢ ಸಂಕಲ್ಪ ಮಾಡೋಣ ಎಂದು ಹೇಳಿದ್ದಾರೆ.
ಹೆಣ್ಣುಮಕ್ಕಳ ಪ್ರತಿಭೆಯನ್ನು ಗುರುತಿಸಿ, ಸಾಧನೆಗೆ ಸಮಾನ ಅವಕಾಶ ಕಲ್ಪಿಸುವ ನಮ್ಮ ಶ್ರೇಷ್ಠ ಸಂಸ್ಕೃತಿ ಹಾಗೂ ಮಾನವ ಧರ್ಮವನ್ನು ಎತ್ತಿ ಹಿಡಿಯೋಣ. ಹೆಣ್ಣುಮಕ್ಕಳಿಗೆ ಶಿಕ್ಷಣ, ರಕ್ಷಣೆ, ತಾರತಮ್ಯರಹಿತ ಬಲಿಷ್ಠ ಸಮಾಜವನ್ನು ಕಟ್ಟುವ ದೃಢ ಸಂಕಲ್ಪ ಮಾಡೋಣ.#NationalGirlChildDay2021
— B.S. Yediyurappa (@BSYBJP) January 24, 2021
ಇದರಂತೆ ಸಚಿವ ಸುಧಾಕರ್ ಅವರು ಟ್ವೀಟ್ ಮಾಡಿ, ಇಂದು ದೇಶದಾದ್ಯಂತ ರಾಷ್ಟ್ರೀ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಣ್ಣು ಮಕ್ಕಳ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಇದೇ ವೇಳೆ ಹ್ಯಾಷ್ (#Selfiewithdaughter) ಟ್ಯಾಗ್ ವೊಂನ್ನು ಆರಂಭಿಸಿದ್ದಾರೆ.
On the occasion of National Girl Child Day today, Health & Family Welfare Department of Karnataka renews it's commitment to the welfare of Girl Child. Let's take #Selfiewithdaughter! pic.twitter.com/YYkCeDzMnn
— Dr Sudhakar K (@mla_sudhakar) January 23, 2021