ಎಲ್ಲಾ ಅಕ್ರಮ ಗಣಿಗಾರಿಕೆ ತಕ್ಷಣ ನಿಲ್ಲಿಸಲು ಮುಖ್ಯಮಂತ್ರಿ ಸೂಚನೆ
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.
Published: 24th January 2021 11:24 AM | Last Updated: 24th January 2021 11:24 AM | A+A A-

ಯಡಿಯೂರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.
ಶಿವಮೊಗ್ಗದಲ್ಲಿಂದು ಮಾತನಾಡಿದ ಅವರು, ಗಣಿಗಾರಿಕೆಗೆ ಅರ್ಜಿ ಹಾಕಿ ನಂತರ ಪರವಾನಿಗೆ ಪಡೆಯಬೇಕು. ಅಧಿಕಾರಿಗಳು ಸ್ಥಳ ಭೇಟಿ ಪರಿಶೀಲನೆ ಬಳಿಕವಷ್ಟೇ ಅನುಮತಿ ನೀಡಲಾಗುವುದು. ಆದರೆ, ಸದ್ಯಕ್ಕೆ ಎಲ್ಲಾ ಅಕ್ರಮ ಕಲ್ಲುಗಣಿಗಾರಿಕೆ ನಿಲ್ಲಬೇಕು ಎಂದು ಸೂಚಿಸಿದರು.
ಬೇಬಿ ಬೆಟ್ಟದ ಬಳಿ ಅಕ್ರಮ ಗಣಿಗಾರಿಗೆ ನಡೆಯುತ್ತಿದೆ. ಇದರಿಂದ ಕೆಆ ರ್ ಎಸ್ ಅಣೆಕಟ್ಟೆಗೆ ಸಮಸ್ಯೆ ಆಗುವ ಸಾಧ್ಯತೆ ಇದೆ. ಹಲವು ಬಾರಿ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಸೂಚಿಸಲಾಗಿದೆ. ಆದರೂ ಅಲ್ಲೊಂದು ಇಲ್ಲೊಂದು ಅಕ್ರಮ ಗಣಿಗಾರಿಕೆ ನಡೆಯುತ್ತಲೇ ಇವೆ. ಅಭಿವೃದ್ಧಿ ಕಾರ್ಯಗಳಿಗೆ ಜಲ್ಲಿ ಕಲ್ಲು ಅಗತ್ಯವಾಗಿ ಬೇಕಾಗುತ್ತದೆ. ಆದರೂ ಅಕ್ರಮ ಗಣಿಗಾರಿಕೆ ನಿಲ್ಲಬೇಕು. ಭೋವಿ ವಡ್ಡರ ಸಮಾಜದವರು ಕಲ್ಲು ಹೊಡೆಯುತ್ತಾರೆ. ಇದರಿಂದ ಯಾವುದೇ ಅನಾಹುತ ಸಂಭವಿಸುವುದಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಜಲ್ಲಿ ಕೊರತೆ ಆಗಬಾರದು ಎಂದು ತಿಳಿಸಿದರು.