
ಸಂಗ್ರಹ ಚಿತ್ರ
ಬೆಂಗಳೂರು: ನಿರಂತರವಾಗಿ ಪತಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೆಲಮಂಗಲದಲ್ಲಿ ಶನಿವಾರ ನಡೆದಿದೆ.
ವಿದ್ಯಾ (38) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ದಾಬಸ್ ಪೇಟೆಯಲ್ಲಿ ಖಾಸಗಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ ಉಮೇಶ್ ಎಂಬುವವರನ್ನು ವಿದ್ಯಾ ವಿವಾಹವಾಗಿದ್ದರು.
ಆತ್ಮಹತ್ಯೆಗೂ ಮುನ್ನ ವಿದ್ಯಾ ಅವರು ಡೆತ್ ನೋಟ್ ಬರೆದಿದ್ದು, ಪತಿ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ. ಈ ಸಂಬಂಧ ಪೊಲೀಸರು ಇದೀಗ ಉಮೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಬಂಧನಕ್ಕೊಳಪಡಿಸಿದ ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ.