ರಾಜ್ಯದಲ್ಲಿ ಇಂದು ಕೊರೋನಾದಿಂದ ಮೂವರು ಸಾವು, ಹೊಸದಾಗಿ 375 ಜನರಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಸೋಮವಾರ 375 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,36,426ಕ್ಕೆ ಏರಿಕೆಯಾಗಿದೆ.

Published: 25th January 2021 08:06 PM  |   Last Updated: 25th January 2021 08:06 PM   |  A+A-


Covid-19_Images1

ಸಾಂದರ್ಭಿಕ ಚಿತ್ರ

Posted By : Lingaraj Badiger
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಸೋಮವಾರ 375 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,36,426ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,200ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 200 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 397333ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 1036 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,17,361ಕ್ಕೆ ಏರಿಕೆಯಾಗಿದೆ. ಇನ್ನು 6,846 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 152 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp