ಎಫ್ ಡಿಎ ಪ್ರಶ್ನೆ ಪತ್ರಿಕೆ‌ ಸೋರಿಕೆ: ಇಬ್ಬರೂ ಕಿಂಗ್ ಪಿನ್ ಗಳ ಬಂಧನ

ಕರ್ನಾಟಕ‌ ಲೋಕಸೇವಾ ಆಯೋಗ(ಕೆಪಿಎಸ್​​ಸಿ)ದ ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಕಿಂಗ್ ಪಿನ್ ಇಬ್ಬರನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

Published: 25th January 2021 06:13 PM  |   Last Updated: 25th January 2021 06:13 PM   |  A+A-


KPSC

ಕೆಪಿಎಸ್ ಸಿ

Posted By : Lingaraj Badiger
Source : UNI

ಬೆಂಗಳೂರು: ಕರ್ನಾಟಕ‌ ಲೋಕಸೇವಾ ಆಯೋಗ(ಕೆಪಿಎಸ್​​ಸಿ)ದ ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಕಿಂಗ್ ಪಿನ್ ಇಬ್ಬರನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದ್ವಿತೀಯ ದರ್ಜೆ ಸಹಾಯಕ ರಮೇಶ್ ಹಾಗೂ ಕಂಟ್ರೋಲ್ ಆಫ್ ಎಕ್ಸಾಂ ಡಿವಿಷನ್​​ನಲ್ಲಿ ಸ್ಟೆನೋಗ್ರಾಫರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸನಾ ಬೇಡಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. 

ಇಬ್ಬರೂ ಆರೋಪಿಗಳು ಕೆಪಿಎಸ್​​​ಸಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದರು. ಬಂಧಿತ ಸನಾ, ಕಳೆದ ಭಾನುವಾರ ನಡೆಯಬೇಕಿದ್ದ ಪರೀಕ್ಷೆಯ ಪ್ರಶ್ನೆ‌ಪತ್ರಿಕೆಯ ಟೈಪ್ ಮಾಡುವ ಕೆಲಸ‌ ಮಾಡುತ್ತಿದ್ದ. ಅಲ್ಲದೇ, ಸ್ವತಃ ಆರೋಪಿ ರಮೇಶ್ ಎಫ್​​​ಡಿಎ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದ. ಆದ್ದರಿಂದಲೇ ಅಕ್ರಮವಾಗಿ ಪ್ರಶ್ನೆ ಪತ್ರಿಕೆ ಪಡೆದುಕೊಂಡಿದ್ದರು. ನಂತರ ಇವರು ತಮ್ಮ ಸ್ನೇಹಿತ ಆರೋಪಿ ಚಂದ್ರು ಎಂಬುವವರಿಗೆ ಪ್ರಶ್ನೆ ಪತ್ರಿಕೆ ನೀಡಿದ್ದರು‌. ಬಳಿಕ ಒಬ್ಬರಿಂದ ಒಬ್ಬರಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಮಾಹಿತಿ ನೀಡಿದರು.

ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಈವರೆಗೆ 16 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp