
ಸಾಂದರ್ಭಿಕ ಚಿತ್ರ
ಬೆಂಗಳೂರು: ವ್ಯಕ್ತಿಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಕಲಾಸಿಪಾಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರದೀಪ್ ಬಂಧಿತ ಆರೋಪಿ. ಈತನಿಂದ ಪ್ರಕರಣಕ್ಕೆ ಸಂಬಂಧಿಸಿ 1,50,000 ರೂ.ಬೆಲೆ ಬಾಳುವ 30 ಗ್ರಾಂ ತೂಕದ ಚಿನ್ನದ ಮಾಂಗಲ್ಯದ ಸರವನ್ನು ವಶಪಡಿಸಿಕೊಂಡಿದ್ದಾರೆ.
ಜನವರಿ 23ರಂದು ಸಂಜೆ 4 ಗಂಟೆಗೆ ಕಲಾಸಿಪಾಳ್ಯ ಬಂಬೂಬಜಾರ್ ಹತ್ತಿರ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಕತ್ತಿನಲ್ಲಿದ್ದ ಸುಮಾರು 1.50 ಲಕ್ಷ ರೂ. ಮೌಲ್ಯದ 30 ಗ್ರಾಂ ತೂಕದ ಚಿನ್ನದ ಮಾಂಗಲ್ಯದ ಸರವನ್ನು ದುಷ್ಕರ್ಮಿಯೊಬ್ಬ ಕಿತ್ತು ಪರಾರಿಯಾಗಿದ್ದ. ಈ ಬಗ್ಗೆ ವ್ಯಕ್ತಿ ಕಲಾಸಿಪಾಳ್ಯ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಕಾಂತ್ ಎಲ್.ಬಿ. ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.