ಆರೋಗ್ಯ ಸೇತು ಆ್ಯಪ್ ಮೂಲಕ ಸಂಗ್ರಹಿಸಿದ ದತ್ತಾಂಶ ಹಂಚಿಕೆಕೊಳ್ಳದಂತೆ 'ಕೇಂದ್ರ'ಕ್ಕೆ ತಡೆ ನೀಡಿದ ಕರ್ನಾಟಕ ಹೈಕೋರ್ಟ್

ಮಾರಕ ಕೊರೋನಾ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದ ಆರೋಗ್ಯ ಸೇತು ಆ್ಯಪ್ ಮೂಲಕ ಸಂಗ್ರಹಿಸಿದ ದತ್ತಾಂಶವನ್ನು ಇತರೆ ಸರ್ಕಾರಿ ಅಧಿಕಾರಿಗಳು ಮತ್ತು ಏಜೆನ್ಸಿಗಳೊಂದಿಗೆ ಹಂಚಿಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ತಡೆ ನೀಡಿದೆ.

Published: 25th January 2021 10:42 PM  |   Last Updated: 25th January 2021 10:42 PM   |  A+A-


Aarogya Setu app-Karnataka High Court

ಆರೋಗ್ಯ ಸೇತು-ಹೈಕೋರ್ಟ್

Posted By : Srinivasamurthy VN
Source : The New Indian Express

ಬೆಂಗಳೂರು: ಮಾರಕ ಕೊರೋನಾ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದ ಆರೋಗ್ಯ ಸೇತು ಆ್ಯಪ್ ಮೂಲಕ ಸಂಗ್ರಹಿಸಿದ ದತ್ತಾಂಶವನ್ನು ಇತರೆ ಸರ್ಕಾರಿ ಅಧಿಕಾರಿಗಳು ಮತ್ತು ಏಜೆನ್ಸಿಗಳೊಂದಿಗೆ ಹಂಚಿಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ತಡೆ ನೀಡಿದೆ.

ಹೌದು... ಆರೋಗ್ಯ ಸೇತು ಆ್ಯಪ್ ಮೂಲಕ ಸಂಗ್ರಹಿಸಿದ ದತ್ತಾಂಶವನ್ನು ಇತರೆ ಸರ್ಕಾರಿ ಅಧಿಕಾರಿಗಳು ಮತ್ತು ಏಜೆನ್ಸಿಗಳೊಂದಿಗೆ ಹಂಚಿಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಮಾಹಿತಿ ಕೇಂದ್ರವನ್ನು (ಎನ್‌ಐಸಿ) ತಡೆಹಿಡಿದಿದೆ.

ಅಂತೆಯೇ ಅದೇ ಸಮಯದಲ್ಲಿ, ಆರೋಗ್ಯ ಸೇತು ಅಪ್ಲಿಕೇಶನ್ ಗೆ ಅಥವಾ ಅದರ ಮೂಲಕ ಡೇಟಾದ ಸಂಗ್ರಹ, ಬಳಕೆಯನ್ನು ತಡೆಯಲು ಹೈಕೋರ್ಟ್ ನಿರಾಕರಿಸಿತು. ಬಳಕೆದಾರರ ತಿಳುವಳಿಕೆಯುಳ್ಳ ಒಪ್ಪಿಗೆ ಬಳಿಕವೇ ಆ್ಯಪ್ ಮೂಲಕ ದತ್ತಾಂಶ ಸಂಗ್ರಹಿಸಲಾಗುತ್ತಿದೆ ಎಂದು ಹೈಕೋರ್ಟ್ ಹೇಳಿದೆ.  ನಗರದ ಸಾಫ್ಟ್‌ವೇರ್ ಎಂಜಿನಿಯರ್ ಅರ್ಜಿದಾರ ಅನಿವರ್ ಎ ಅರವಿಂದ್ ಅವರು ಸಲ್ಲಿಸಿದ್ದ ಅರ್ಜಿಯ ಕುರಿತು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠವು ಈ ಆದೇಶವನ್ನುನೀಡಿದೆ.

ಆರೋಗ್ಯ ಸೇತು ಆ್ಯಪ್ ಮೂಲಕ ದತ್ತಾಂಶ ಸಂಗ್ರಹಣೆ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ತಡೆ ನೀಡಬೇಕು ಎಂದು ಕೋರಿ ಅರ್ಜಿದಾರರು ಅರ್ಜಿ ಸಲ್ಲಿಸಿದ್ದರು.  


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp