ರಾಜ್ಯದಲ್ಲಿ ಇಂದು 529 ಮಂದಿಗೆ ಕೊರೋನಾ, 4 ಬಲಿ!

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಸೋಮವಾರ 529 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,36,955ಕ್ಕೆ ಏರಿಕೆಯಾಗಿದೆ.

Published: 26th January 2021 07:34 PM  |   Last Updated: 26th January 2021 07:34 PM   |  A+A-


coronavirus testing kits

ಕೊರೋನಾ ವೈರಸ್

Posted By : Vishwanath S
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಸೋಮವಾರ 529 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,36,955ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ನಾಲ್ಕು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,204ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 276 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,97,609ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 738 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,18,099ಕ್ಕೆ ಏರಿಕೆಯಾಗಿದೆ. ಇನ್ನು 6,633 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 147 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Stay up to date on all the latest ರಾಜ್ಯ news
Poll
Coronil tablets

ಕೋವಿಡ್-19 ವಿರುದ್ಧಪತಂಜಲಿಯ ಕೊರೋನಿಲ್ ಮಾತ್ರೆಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ನೀವು ಭಾವಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp