ಸ್ವಾತಂತ್ರ್ಯ ನಂತರ ದೇಶದ ರೈತರು ಭವಿಷ್ಯ ಹಾಗೂ ಅಸ್ತಿತ್ವಕ್ಕಾಗಿ ಬೀದಿಗಿಳಿದು ಹೋರಾಟ- ಡಿಕೆ ಶಿವಕುಮಾರ್
ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ದೇಶದ ಜನ, ರೈತರು ತಮ್ಮ ಭವಿಷ್ಯ ಹಾಗೂ ಅಸ್ತಿತ್ವ ಉಳಿಸಿಕೊಳ್ಳಲು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Published: 26th January 2021 04:42 PM | Last Updated: 26th January 2021 05:11 PM | A+A A-

ಗಣರಾಜೋತ್ಸವ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಬೆಂಗಳೂರು: ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ದೇಶದ ಜನ, ರೈತರು ತಮ್ಮ ಭವಿಷ್ಯ ಹಾಗೂ ಅಸ್ತಿತ್ವ ಉಳಿಸಿಕೊಳ್ಳಲು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ವತಿಯಿಂದ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಇಡೀ ರಾಷ್ಟ್ರ ಇಂದು ಕವಾಲು ದಾರಿಯಲ್ಲಿ ನಿಂತಿದೆ. ಕಳೆದ ಒಂದು ವರ್ಷದಿಂದ ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿ ವಿಚಾರದಲ್ಲಿ ದೇಶದುದ್ದಗಲಕ್ಕೂ ಹೋರಾಟ ನಡೆಯುತ್ತಿರುವುದನ್ನು ನಾವು ನೋಡುತ್ತಿದ್ದೇವೆ.
ದೇಶದ ಅನ್ನದಾತ, ಕೃಷಿಕನ ರಕ್ಷಣೆಗೆ ನಾವೆಲ್ಲರೂ ನಿಲ್ಲಬೇಕಾದ ಅನಿವಾರ್ಯತೆ ಬಂದಿದೆ. ರೈತರ ರಕ್ಷಣೆ ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ಇಡೀ ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ ಎಂಬ ಹೆಗ್ಗಳಿಕೆ ನಮ್ಮ ಸಂಸತ್ತಿಗಿದೆ. ಇಡೀ ವಿಶ್ವ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸುತ್ತದೆ.ಅದಕ್ಕೆ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಪ್ರಮುಖ ಕಾರಣ. ಆದರೆ, ಇಂತಹ ಸಂಸ ತ್ತಿನಲ್ಲಿ ಚರ್ಚೆ ಮಾಡದೇ ಕಾಯ್ದೆಗ ಳನ್ನು ಏಕಪಕ್ಷೀಯವಾಗಿ ಅಂಗೀಕಾರ ಮಾಡಲಾಗುತ್ತಿದೆ. ಇದನ್ನು ವಿರೋಧಿಸಿ ದೇಶದ ಎಲ್ಲ ಜನ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಇಂದು ಸಂವಿಧಾನವನ್ನು ಅಳವಡಿಸಿಕೊಳ್ಳುವ ಮೂಲಕ ಭಾವನಾತ್ಮಕವಾಗಿ ಸ್ವಾತಂತ್ರ್ಯ ಪಡೆದ ದಿನ. ಈ ಪವಿತ್ರ ದಿನ ದೇಶದ ಅನ್ನದಾತ ಸಂವಿಧಾನ ವಿರೋಧಿ ಸರ್ಕಾರ ಹಾಗೂ ಕರಾಳ ಕಾಯ್ದೆಗಳ ವಿರುದ್ಧ ಸಿಡಿದೆದ್ದು ನಿಂತಿದ್ದಾನೆ. ಅನ್ನದಾತನ ಬೆನ್ನಿಗೆ ನಾವೆಲ್ಲರೂ ನಿಲ್ಲೋಣ. ದೇಶ ಉಳಿಸೋಣ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.