ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ವಿರುದ್ಧ ಪತ್ನಿಯಿಂದ ವರದಕ್ಷಿಣೆ ಕಿರುಕುಳ ದೂರು: ಸಾಕ್ಷಿ ಸಂಗ್ರಹಣೆಯಲ್ಲಿ ಪೊಲೀಸರು
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕೊಲೆಗೆ ಯತ್ನ ಕೇಸಿನ ವಿಚಾರಣೆ ನಡೆಸುತ್ತಿರುವ ಬೆಂಗಳೂರಿನ ಆರ್ ಆರ್ ನಗರ ಪೊಲೀಸರು ಇನ್ನೂ ಸಾಕ್ಷಿಗಳನ್ನು ಸಂಗ್ರಹಿಸುತ್ತಿದ್ದು, ದಿನೇಶ್ ಅವರನ್ನು ವಿಚಾರಣೆ ನಡೆಸಬೇಕಿದೆ.
Published: 26th January 2021 10:22 AM | Last Updated: 26th January 2021 10:22 AM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕೊಲೆಗೆ ಯತ್ನ ಕೇಸಿನ ವಿಚಾರಣೆ ನಡೆಸುತ್ತಿರುವ ಬೆಂಗಳೂರಿನ ಆರ್ ಆರ್ ನಗರ ಪೊಲೀಸರು ಇನ್ನೂ ಸಾಕ್ಷಿಗಳನ್ನು ಸಂಗ್ರಹಿಸುತ್ತಿದ್ದು, ದಿನೇಶ್ ಅವರನ್ನು ವಿಚಾರಣೆ ನಡೆಸಬೇಕಿದೆ.
ಕಳೆದ ಶುಕ್ರವಾರ ದಿನೇಶ್ ಕುಮಾರ್ ಅವರ ಪತ್ನಿ ದೀಪ್ತಿ ಪತಿ ಹಾಗೂ ಅವರ ಸೋದರನ ಪತ್ನಿ ವಿರುದ್ಧ ದೂರು ನೀಡಿದ್ದರು. ತಮಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿರುವುದಲ್ಲದೆ ತೀವ್ರ ಹಿಂಸೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನಾವು ಸಾಕ್ಷಿಯನ್ನು ಕಲೆ ಹಾಕುತ್ತಿದ್ದು ಸದ್ಯದಲ್ಲಿಯೇ ಬಂಧಿಸುತ್ತೇವೆ.
ಕಳೆದ ಮೂರು ದಿನಗಳಿಂದ ದಿನೇಶ್ ಕುಮಾರ್ ಅವರ ಫೋನ್ ಸ್ವಿಚ್ ಆಫ್ ಆಗಿದೆ. ಅವರ ಮನೆಗೆ ನೊಟೀಸ್ ಕಳುಹಿಸಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗುವುದು ಎಂದರು.