ಪ್ರತಿಭಟನಾನಿರತ ರೈತರ ಕುರಿತು ಹೇಳಿಕೆ; ಕೃಷಿ ಸಚಿವ ಬಿಸಿ ಪಾಟೀಲ್ ವಿರುದ್ಧ ಪೊಲೀಸ್ ದೂರು!

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಉಗ್ರರಿಗೆ ಹೋಲಿಕೆ ಮಾಡಿದ ಕರ್ನಾಟಕ ಕೃಷಿ ಸಚಿವ ಬಿಸಿ ಪಾಟೀಲ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು  ಪೊಲೀಸ್ ದೂರು ದಾಖಲಿಸಿದ್ದಾರೆ.

Published: 26th January 2021 11:13 PM  |   Last Updated: 26th January 2021 11:15 PM   |  A+A-


Congress workers lodge a complaint

ಪೊಲೀಸ್ ದೂರು ನೀಡಿದ ಕಾರ್ಯಕರ್ತರು

Posted By : Srinivasamurthy VN
Source : ANI

ಬೆಂಗಳೂರು: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಉಗ್ರರಿಗೆ ಹೋಲಿಕೆ ಮಾಡಿದ ಕರ್ನಾಟಕ ಕೃಷಿ ಸಚಿವ ಬಿಸಿ ಪಾಟೀಲ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು  ಪೊಲೀಸ್ ದೂರು ದಾಖಲಿಸಿದ್ದಾರೆ.

ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಸಿ ಪಾಟೀಲ್ ವಿರುದ್ಧ ದೂರು ಸಲ್ಲಿಕೆ ಮಾಡಿದ್ದಾರೆ. 

ದೆಹಲಿ ಕೆಂಪುಕೋಟೆಗೆ ನುಗ್ಗಿದ್ದ ಪ್ರತಿಭಟನಾಕಾರರ ಕುರಿತು ಮಾತನಾಡಿದ್ದ ಸಚಿವ ಬಿಸಿ ಪಾಟೀಲ್ ದೆಹಲಿಯ ಕೆಂಪು ಕೋಟೆಗೆ ನುಗ್ಗಿದವರು ರೈತರಲ್ಲ. ಭಯೋತ್ಪಾಕರು ಎಂದು ಹೇಳಿದ್ದರು. ಇಂದು 72 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೊಪ್ಪಳದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಸಚಿವರು, ರೈತರು ಕೆಂಪು ಕೋಟೆಗೆ ಮುತ್ತಿಗೆ ಹಾಕಿದ ಘಟನೆಯ ಹಿಂದೆ ರೈತರ ವೇಷದಲ್ಲಿ ಕಾಂಗ್ರೆಸ್ ಮತ್ತು ಪಾಕ್ ಬೆಂಬಲಿತ ಭಯೋತ್ಪಾದಕರು ಇದ್ದಾರೆ ಎಂದು ಹೇಳಿದ್ದರು. 

"ಭಾರತೀಯ ಧ್ವಜ ಮತ್ತು ಕೆಂಪು ಕೋಟೆಗೆ ವಿಶೇಷ ಸ್ಥಾನಮಾನ ಇದ್ದು, ಸಾಂವಿಧಾನಿಕ ಪಾವಿತ್ರ್ಯವನ್ನು ಹೊಂದಿದೆ. ವಿಶೇಷವಾಗಿ ಗಣರಾಜ್ಯೋತ್ಸವದಂದು ಅವಮಾನಿಸುವುದು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿದೆ. ಇದು ಅತ್ಯಂತ ಖಂಡನೀಯ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ರೈತರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಇತಿಹಾಸದಲ್ಲೇ ಇಲ್ಲ ಮತ್ತು ಇದು ಅವರ ಸಂಸ್ಕೃತಿ ಅಲ್ಲ. ಕಾಂಗ್ರೆಸ್ ಸಹಾಯದಿಂದ, ರೈತರ ವೇಷದಲ್ಲಿರುವ ಭಯೋತ್ಪಾದಕರು ಮುಂದಿನ ದಿನಗಳಲ್ಲಿ ರಾಷ್ಟ್ರದ ಗಡಿಯಲ್ಲೂ ಸೈನಿಕರ ಮೇಲೆ ದಾಳಿ ಮಾಡಬಹುದು ಎಂದು ಬಿಸಿ ಪಾಟೀಲ್ ಹೇಳಿದ್ದರು.

ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆ ಮಾಡಿದ್ದಾರೆ.

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp