ಕೊರೋನಾ ಲಸಿಕೆ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ

ಕೊರೋನಾ ವಿರುದ್ಧ ದೇಶದಲ್ಲಿ ನೀಡಲಾಗುತ್ತಿರುವ 2 ಲಸಿಕೆಗಳ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. 

Published: 26th January 2021 09:17 AM  |   Last Updated: 26th January 2021 09:17 AM   |  A+A-


file photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ನವದೆಹಲಿ: ಕೊರೋನಾ ವಿರುದ್ಧ ದೇಶದಲ್ಲಿ ನೀಡಲಾಗುತ್ತಿರುವ 2 ಲಸಿಕೆಗಳ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. 

ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಭಾರತೀಯ ದಂಡ ಸಂಹಿತೆ 1860ರ ಅಡಿ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶಿಸಿದೆ ಎಂದು ತಿಳಿದುಬಂದಿದೆ. 

ಸುಳ್ಳು ಸುದ್ದಿಗೆ ಓಗೊಟ್ಟು ದೇಶದಾದ್ಯಂತ ಲಸಿಕೆ ಪಡೆಯಲು ಸ್ವತಃ ಆರೋಗ್ಯ ಕಾರ್ಯಕರ್ತರೇ ಹಿಂದು ಮುಂದು ನೋಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ. 

ಈ ಕುರಿತು ರಾಜ್ಯ ಸರ್ಕಾರಗಳಿಗೆ ಪತ್ರ ಬರದಿರುವ ಕೇಂದ್ರ ಗೃಹ ಸಚಿವಾಲಯ ಮುಖ್ಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರು, ಲಸಿಕೆ ಸಾಮರ್ಥ್ಯ ಹೊಂದಿವೆ ಎಂದು ಸ್ವತಃ ಔಷಧಗಳ ಕುರಿತ ರಾಷ್ಟ್ರೀಯ ನಿಯಂತ್ರಣಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ. ಇದರ ಸುಳ್ಳುಸುದ್ದಿ ಹರಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. 

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp