ಕರ್ನಾಟಕ: ಪಿಯು ಕಾಲೇಜಿನ 25 ಮಂದಿ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು!

ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವಂತೆಯೇ ಇತ್ತ ಪಿಯು ಕಾಲೇಜಿನ ಸಂಸ್ಛೆಯ 25 ಮಂದಿ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

Published: 27th January 2021 11:23 PM  |   Last Updated: 27th January 2021 11:23 PM   |  A+A-


Covid-19 Test

ಸಾಂದರ್ಭಿಕ ಚಿತ್ರ

Posted By : Srinivasamurthy VN
Source : The New Indian Express

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವಂತೆಯೇ ಇತ್ತ ಪಿಯು ಕಾಲೇಜಿನ ಸಂಸ್ಛೆಯ 25 ಮಂದಿ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಹೌದು.. ಕರ್ನಾಟಕದ ಸೋಮವಾರಪೇಟೆ ತಾಲ್ಲೂಕಿನ ಪಿಯು ಕಾಲೇಜಿನ 25 ವಿದ್ಯಾರ್ಥಿಗಳು ಕೋವಿಡ್-19 ಸೋಂಕಿಗೆ ತುತ್ತಾಗಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಗರಗಂಡೂರು ಗ್ರಾಮದ ಮೊರಾರ್ಜಿ ದೇಸಾಯಿ ಪಿಯು ಕಾಲೇಜಿನಲ್ಲಿ ಜನವರಿ 11 ವರೆಗೂ ಆಫ್‌ಲೈನ್ ತರಗತಿಗಳನ್ನು ನಡೆಸಲಾಗುತ್ತಿತ್ತು. ಆದರೆ ರಾಜ್ಯ ಸರ್ಕಾರ ಆಫ್ ಲೈನ್ ತರಗತಿಗಳಿಗೆ ಅವಕಾಶ ನೀಡಿದ ಬಳಿಕ ಎಲ್ಲ ವಿದ್ಯಾರ್ಥಿಗಳನ್ನೂ ಕೋವಿಡ್ ಪರೀಕ್ಷೆಗೊಳಪಡಿಸಿ ಬಳಿಕ ತರಗತಿಗಳಿಗೆ ಅವಕಾಶ ನೀಡಲಾಗಿತ್ತು. ಒಟ್ಟು 76 ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಿದ್ದರು 

ಆದರೆ ಜನವರಿ 21ರಂದು ಕಾಲೇಜಿನ ಓರ್ವ ವಿದ್ಯಾರ್ಥಿಗೆ ಜ್ವರ ಕಾಣಿಸಿಕೊಂಡಿತ್ತು.  ಈ ವೇಳೆ ವಿದ್ಯಾರ್ಥಿಯನ್ನು ಜನವರಿ 25ರಂದು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ವರದಿ ಪಾಸಿಟಿವ್ ಬಂದಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕಾಲೇಜಿನ ಆಡಳಿತ ಮಂಡಳಿ  ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಕಾಲೇಜು ಆವರಣದಲ್ಲಿ ಕೋವಿಡ್ -19 ಪರೀಕ್ಷೆಗಳನ್ನು ಏರ್ಪಡಿಸಿತು. ಜನವರಿ 25 ರಂದು ಪರೀಕ್ಷೆಗಳನ್ನು ನಡೆಸಲಾಗಿತ್ತು. ಈ ಪೈಕಿ 25 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರವುದು ದೃಢಪಟ್ಟಿದೆ.

ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮುಂದಿನ 14 ದಿನಗಳವರೆಗೆ ಸಂಸ್ಥೆಯನ್ನು ಮುಚ್ಚಿ ಸೀಲ್ ಡೌನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. 

Stay up to date on all the latest ರಾಜ್ಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp