ಜನವರಿ 30ರಂದು ಸುಪ್ರಸಿದ್ಧ ಕಂಬಳ: ನಳಿನ್ ಕುಮಾರ್ ಕಟೀಲ್

ಕೋವಿಡ್ 19 ಮಾರ್ಗಸೂಚಿಗಳನ್ನು ಅನುಸರಿಸಿ ಜನವರಿ 30 ರಿಂದ ಕರಾವಳಿ ಕರ್ನಾಟಕದ ಪ್ರಸಿದ್ಧ ಕ್ರೀಡೆ ಕಂಬಳ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Published: 27th January 2021 12:12 PM  |   Last Updated: 27th January 2021 01:27 PM   |  A+A-


nalin kumar kateel

ನಳಿನ್ ಕುಮಾರ್ ಕಟೀಲ್

Posted By : Shilpa D
Source : UNI

ಮಂಗಳೂರು: ಕೋವಿಡ್ 19 ಮಾರ್ಗಸೂಚಿಗಳನ್ನು ಅನುಸರಿಸಿ ಜನವರಿ 30 ರಿಂದ ಕರಾವಳಿ ಕರ್ನಾಟಕದ ಪ್ರಸಿದ್ಧ ಕ್ರೀಡೆ ಕಂಬಳ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ಬಿಜೆಪಿ ಕರ್ನಾಟಕ ರಾಜ್ಯ ಅಧ್ಯಕ್ಷ ಮತ್ತು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಕಂಬಳಗಳನ್ನು ಆಯೋಜಿಸುವ ಬಗ್ಗೆ ಚರ್ಚಿಸಲು ಕರೆಯಲಾದ ಸಭೆಯಲ್ಲಿ ಮಾತನಾಡಿದ ಅವರು, ನವೆಂಬರ್-ಡಿಸೆಂಬರ್ ನಿಂದ ಫೆಬ್ರವರಿ-ಮಾರ್ಚ್ ವರೆಗೆ ಸುಗ್ಗಿಯ ನಂತರ ಕಂಬಳವನ್ನು ನಡೆಸಲಾಗುತ್ತದೆ ಎಂದಿದ್ದಾರೆ.

ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ದೂರವನ್ನು ಖಾತರಿಪಡಿಸುವಂತಹ ಮಾರ್ಗಸೂಚಿಗಳನ್ನು ಪಾಲಿಸುವ ಅಗತ್ಯವನ್ನು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಒತ್ತಿ ಹೇಳಿದ್ದು, ಕಂಬಳ ನಡೆಯುವ ಸ್ಥಳದ ಸುತ್ತಲೂ ಜನಸಂದಣಿಯನ್ನು ಮಾಡಬಾರದು ಮತ್ತು ಕೋಣಗಳ ಓಟಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದ್ದು, ಮಕ್ಕಳು ಮತ್ತು ವೃದ್ಧರು ಕಾರ್ಯಕ್ರಮಗಳಿಗೆ ಹಾಜರಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp