ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಿ, ಅಲ್ಲಿಯವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ

ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ತಿರುಗೇಟು ನೀಡಿರುವ ಕರ್ನಾಟಕ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು, ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಿ, ಅಲ್ಲಿಯವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಸಿಹಿದ್ದಾರೆ.

Published: 27th January 2021 10:37 PM  |   Last Updated: 27th January 2021 10:37 PM   |  A+A-


Minister laxman savadi

ಸಚಿವ ಲಕ್ಷ್ಮಣ ಸವದಿ

Posted By : Srinivasamurthy VN
Source : ANI

ಬೆಂಗಳೂರು: ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ತಿರುಗೇಟು ನೀಡಿರುವ ಕರ್ನಾಟಕ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು, ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಿ, ಅಲ್ಲಿಯವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಸಿಹಿದ್ದಾರೆ.

ಬೆಳಗಾವಿ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಹೇಳಿಕೆಗೆ ತಿರುಗೇಟು ನೀಡಿರುವ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು, ಈ ಪ್ರಾಂತೀಯ ಜನತೆ ಮತ್ತು ನಾನು ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಬೇಕು. ಅಲ್ಲಿಯವರೆಗೂ ಮುಂಬೈ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.  

ಇಂದು ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದ ಕುರಿತಂತೆ ಸಿಎಂ ಉದ್ಧವ್ ಠಾಕ್ರೆ ಪುಸ್ತಕವೊಂದನ್ನು ಬಿಡುಗಡೆ ಮಾಡಿದ್ದರು. ಈ ವೇಳೆ ಮಾತನಾಡಿದ ಅವರು, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡುವವರೆಗೂ ಗಡಿಯಲ್ಲಿ ಮರಾಠಿ ಮಾತನಾಡುವ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು. ಇಲ್ಲಿಯವರೆಗೂ ಏನೆಲ್ಲ ಆಗಿದೆಯೋ ಅದರ ಬಗ್ಗೆ ಯೋಜಿಸುವುದು ಬೇಡ. ಆದರೆ ಇಂದಿನಿಂದ ನಾವು ಗೆಲ್ಲಲು ಹೋರಾಡಬೇಕಿದೆ. ದೀರ್ಘ ಕಾಲದಿಂದಲೂ ಉಳಿದಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ದಿಷ್ಠ ಸಮಯದಲ್ಲಿ ಪರಿಹರಿಸಿಕೊಳ್ಳಬೇಕು ಎಂದು ಹೇಳಿದ್ದರು.

Stay up to date on all the latest ರಾಜ್ಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp