ಹಿಂದಿ ಹೇರಿಕೆ ಸಮರ್ಥನೆ: ದೊಡ್ಡರಂಗೇಗೌಡ ಕ್ಷಮೆಯಾಚನೆ

ಹಿಂದಿ ಭಾಷೆಯನ್ನು ಸಮರ್ಥಿಸಿ ಹೇಳಿಕೆ ನೀಡಿ ಭಾರಿ ವಿವಾದಕ್ಕೆ ಗುರಿಯಾಗಿದ್ದ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ದೊಡ್ಡ ರಂಗೇಗೌಡ, ಈಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

Published: 28th January 2021 12:51 AM  |   Last Updated: 28th January 2021 12:56 PM   |  A+A-


Doddarange Gowda

ದೊಡ್ಡರಂಗೇಗೌಡ

Posted By : Srinivasamurthy VN
Source : UNI

ಬೆಂಗಳೂರು: ಹಿಂದಿ ಭಾಷೆಯನ್ನು ಸಮರ್ಥಿಸಿ ಹೇಳಿಕೆ ನೀಡಿ ಭಾರಿ ವಿವಾದಕ್ಕೆ ಗುರಿಯಾಗಿದ್ದ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ದೊಡ್ಡ ರಂಗೇಗೌಡ, ಈಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

ತಮ್ಮ ಹೇಳಿಕೆಯಲ್ಲಿ ಅವರು, "ಕನ್ನಡಿಗರ ಮೇಲೆ ಹಿಂದಿ ಹಾಗೂ ಇಂಗ್ಲಿಷ್ ಭಾಷೆ ಹೇರಿಕೆಯ ರೀತಿ ನೀತಿಗಳನ್ನು ಸಹಿಸುವುದಿಲ್ಲ. ತಮ್ಮ ಮಾತುಗಳು ಕನ್ನಡಿಗರ ಮನಸ್ಸನ್ನು ನೋಯಿಸಿದ್ದರೆ ಕ್ಷಮೆಯಾಚಿಸುತ್ತೇನೆ" ಎಂದಿದ್ದಾರೆ. ‘ಯಾವುದೇ ಭಾಷೆಯನ್ನು ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತಿಲ್ಲ. ನಾನು ಭಕ್ತಿಪೂರ್ವಕವಾಗಿ ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ದೈನಿಕವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಕನ್ನಡಿಗರ ಮೇಲೆ ಹಿಂದಿ ಹಾಗೂ ಇಂಗ್ಲಿಷ್ ಭಾಷೆ ಹೇರಿಕೆಯ ರೀತಿ ನೀತಿಗಳನ್ನು ಸಹಿಸುವುದಿಲ್ಲ. ನನ್ನ ಮಾತುಗಳು ಕನ್ನಡಿಗರ ಮನಸ್ಸನ್ನು ನೋಯಿಸಿದ್ದರೆ ಕ್ಷಮೆಯಾಚಿಸುತ್ತೇನೆ.  ಆದರೆ 250 ವರ್ಷಗಳ ಗುಲಾಮಗಿರಿಯ ಸಂಕೇತವಾಗಿರುವ ಇಂಗ್ಲಿಷ್ ಅನ್ನು ಒಪ್ಪುತ್ತೀರಾದರೇ, ದೇಸಿ ಭಾಷೆಯ ಬಗ್ಗೆ ವಿರೋಧ ಏಕೆ ಎಂಬುದು ನನಗೆ ಅರ್ಥವಾಗದ ಸಂಗತಿ. ಎಷ್ಟೇ ವಿರೋಧ ವ್ಯಕ್ತವಾದರೂ ಸಮ್ಮೇಳನದ ಅಧ್ಯಕ್ಷ ಭಾಷಣದಲ್ಲೂ ಇದೇ ನಿಲುವು ಇರುತ್ತದೆ. ಯಾವುದೇ ಭಾಷೆಯನ್ನು ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತಿಲ್ಲ. ನಾನು ಭಕ್ತಿ ಪೂರ್ವಕವಾಗಿ ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೇರೆಸುತ್ತೇನೆ ಎಂದು ಪ್ರತಿಪಾದಿಸಿದ್ದರು.

ಹಿಂದಿ ಭಾಷೆಯ ಬಗೆಗಿನ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಟೀಕೆಗೂ ಗುರಿಯಾಗಿತ್ತು. ಅವರು ತಮ್ಮ ಹೇಳಿಕೆ ವಾಪಸ್ ಪಡೆದು, ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಬರಗೂರು ರಾಮಚಂದ್ರಪ್ಪ, ಎಸ್.ಜಿ. ಸಿದ್ಧರಾಮಯ್ಯ, ಮುಖ್ಯಮಂತ್ರಿ ಚಂದ್ರು ಸೇರಿದಂತೆ ಹಲವರು ಗೌಡರ ಹೇಳಿಕೆ  ಖಂಡಿಸಿದ್ದರು. 
 

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp