2020-2021ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

2020-21ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ.

Published: 28th January 2021 04:14 PM  |   Last Updated: 28th January 2021 05:59 PM   |  A+A-


suresh kumar

ಸುರೇಶ್ ಕುಮಾರ್

Posted By : Lingaraj Badiger
Source : Online Desk

ಬೆಂಗಳೂರು: 2020-21ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಜೂನ್ 14ರಿಂದ ಜೂನ್ 25ರ ವರೆಗೆ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಜೂನ್ 14ರಂದು ಪ್ರಥಮ ಭಾಷೆ, ಜೂನ್ 16 ಗಣಿತ ಪರೀಕ್ಷೆ, ಜೂನ್ 18ರಂದು ಇಂಗ್ಲೀಷ್ ಹಾಗೂ ಕನ್ನಡ, ಜೂನ್ 21ರಂದು ವಿಜ್ಞಾನ, ಜೂನ್ 23ರಂದು ಹಿಂದಿ ಹಾಗೂ ಜೂನ್ 25ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಇದು ತಾತ್ಕಾಲಿಕ ವೇಳಾಪಟ್ಟಿ ಯಾಗಿದ್ದು ಆಕ್ಷೇಪ ಇದ್ದಲ್ಲಿ ಮನವಿ ಸಲ್ಲಿಕೆ ಮಾಡಬಹುದು ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಸೂಚಿಸಿದ್ದಾರೆ.

Stay up to date on all the latest ರಾಜ್ಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp