ಉದ್ದವ್ ಠಾಕ್ರೆ ಹೇಳಿಕೆಗೆ ಡಿಸಿಎಂ ಸವದಿ, ಈಶ್ವರಪ್ಪ ತಿರುಗೇಟು

ಕರ್ನಾಟಕ ಮಹಾರಾಷ್ಟ್ರ ಗಡಿ ಸಮಸ್ಯೆ ಸುಪ್ರೀಂಕೋರ್ಟ್ ನಲ್ಲಿ ಇತ್ಯರ್ಥವಾಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಆಗ್ರಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕರ್ನಾಟಕ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಗುರುವಾರ ತಿರುಗೇಟು ನೀಡಿದ್ದಾರೆ. 

Published: 28th January 2021 10:43 AM  |   Last Updated: 28th January 2021 12:14 PM   |  A+A-


Karnataka Deputy CM Laxman Savadi

ಲಕ್ಷ್ಮಣ್ ಸವದಿ

Posted By : Manjula VN
Source : Online Desk

ಬೆಂಗಳೂರು: ಕರ್ನಾಟಕ ಮಹಾರಾಷ್ಟ್ರ ಗಡಿ ಸಮಸ್ಯೆ ಸುಪ್ರೀಂಕೋರ್ಟ್ ನಲ್ಲಿ ಇತ್ಯರ್ಥವಾಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಆಗ್ರಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕರ್ನಾಟಕ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಗುರುವಾರ ತಿರುಗೇಟು ನೀಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಸವದಿಯವರು, ಈ ಭಾಗವನ್ನು ಮುಂಬೈ-ಕರ್ನಾಟಕ ಎಂದೇ ಕರೆಯಲಾಗುತ್ತದೆ. ಅಂದರೆ, ಮಹಾರಾಷ್ಟ್ರ ರಾಜಧಾನಿ ಮುಂಬೈ ಮೇಲೆ ನಮಗೂ ಹಕ್ಕಿದೆ ಎಂದಾಯಿತು. ಹೀಗಾಗಿ ಸುಪ್ರೀಂಕೋರ್ಟ್ ನಲ್ಲಿ ಗಡಿ ಸಮಸ್ಯೆ ಇತ್ಯರ್ಥವಾಗುವವರೆಗೂ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ. 

ಮುಂಬೈಯನ್ನು ಅಧಿಕೃತವಾಗಿ ಕರ್ನಾಟಕದ ಭಾಗವನ್ನಾಗಿ ಮಾಡುವವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸುವುದು ಸೂಕ್ತ ಎಂದು ಲಕ್ಷ್ಮಣ ಸವದಿ ಟಾಂಗ್ ನೀಡಿದ್ದಾರೆ.

ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಮಹಾಜನ್ ಆಯೋಗದ ವರದಿಯೇ ಅಂತಿಮ ಎಂದು ಕರ್ನಾಟಕ ಸಾವಿರ ಬಾರಿ ಹೇಳಿದೆ. ಆದರೆ ಗಡಿ ಸಮಸ್ಯೆಯನ್ನು ಜೀವಂತವಾಗಿಡಲು ಬಯಸುವ ಮಹಾರಾಷ್ಟ್ರ ಮಾತ್ರ ಆಗಾಗ ತಕರಾರು ತೆಗೆಯುತ್ತಲೇ ಇರುತ್ತದೆ ಎಂದು ಲಕ್ಷ್ಮಣ ಸವದಿ ಹರಿಹಾಯ್ದಿದ್ದಾರೆ. 

ಇದೇ ವೇಳೆ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿರುವ ಉದ್ಧವ್ ಠಾಕ್ರೆ ಹೇಳಿಕೆಯನ್ನು ಖಂಡಿಸಿರುವ ಲಕ್ಷ್ಮಣ ಸವದಿ, ಅವರು ಬೆಳಗಾವಿ ಮೇಲೆ ಕಣ್ಣು ಹಾಕಿದರೆ ನಾವು ಮುಂಬಯಿ ಮೇಲೆ ಕಣ್ಣು ಹಾಕುತ್ತೇವೆ ಎಂದು ಎಚ್ಚರಿಸಿದ್ದಾರೆ. 

ಜನಪ್ರಿಯತೆ ಕಡಿಮೆಯಾಗುತ್ತಿರುವುದರಿಂದ ಮಹಾರಾಷ್ಟ್ರ ಮುಖ್ಯಮಂತ್ರಿಯಿಂದ ಇಲ್ಲಸಲ್ಲದ ಹೇಳಿಕೆ: ಕೆ ಎಸ್‌ ಈಶ್ವರಪ್ಪ
ತಮ್ಮ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಬೇಕು ಎನ್ನುವ ದುರುದ್ದೇಶದಿಂದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಇಲ್ಲಸಲ್ಲದ ಹೇಳಿಕೆಯನ್ನು ನೀಡುತ್ತಿದ್ದಾರೆ. ಅವರ ಹೇಳಿಕೆಯನ್ನು ತಾವು ಉಗ್ರವಾಗಿ ಖಂಡಿಸುತ್ತೇನೆ ಎಂದು ಗ್ರಾಮೀಣಾಭಿವೃದ್ದಿ ಸಚಿವರಾದ ಕೆ. ಎಸ್‌ ಈಶ್ವರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹ.ನೀ ದೀಪಕ್‌ ಅವರ ನೇತೃತ್ವದ ಕರುನಾಡು ವಿಜಯಸೇನೆಯ ಕೇಂದ್ರ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮರಾಠಿಗರು ಕರ್ನಾಟಕ ರಾಜ್ಯದಲ್ಲಿ ವಾಸಿಸುತ್ತಿದ್ದಾರೋ ಆ ಪ್ರದೇಶಗಳೆಲ್ಲಾ ಮಹಾರಾಷ್ಟ್ರಕ್ಕೆ ಸೇರಬೇಕು ಎನ್ನುವ ಅಸಂಬದ್ದ ಹೇಳಿಕೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ನೀಡಿದ್ದಾರೆ. ಇದೇ ರೀತಿ ಕರ್ನಾಟಕದ ವಿವಿಧ ಭಾಗಗಳ ಜನರು ಮಹಾರಾಷ್ಟ್ರ ಹಾಗೂ ವಿಶೇಷವಾಗಿ ಮುಂಬಯಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ, ಆ ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಿ ಎಂದು ಕೇಳುವುದು ಸರಿಯಾಗುವುದೇ ಎಂದು ಪ್ರಶ್ನಿಸಿದರು.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp