ರಾಜ್ಯದಲ್ಲಿ ಇಂದು ಕೊರೋನಾಗೆ 2 ಬಲಿ, ಹೊಸದಾಗಿ 464 ಜನರಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 464 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,38,865ಕ್ಕೆ ಏರಿಕೆಯಾಗಿದೆ.

Published: 30th January 2021 07:41 PM  |   Last Updated: 30th January 2021 07:46 PM   |  A+A-


coronavirus

ಕೊರೊನಾ ಸೋಂಕು

Posted By : Vishwanath S
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಇಂದು 464 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,38,865ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,213ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 233 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,98,644ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 547 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,20,657ಕ್ಕೆ ಏರಿಕೆಯಾಗಿದೆ. ಇನ್ನು 5,976 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 147 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp