ಕೋವಿಶೀಲ್ಡ್ ಮತ್ತು ಕ್ಯಾವ್ಯಾಕ್ಸಿನ್ ಎರಡೂ ಸುರಕ್ಷಿತ: ಆರೋಗ್ಯ ಸಚಿವ ಸುಧಾಕರ್

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ಗುರುವಾರ ಹೇಳಿದ್ದಾರೆ.

Published: 30th January 2021 08:42 PM  |   Last Updated: 30th January 2021 08:42 PM   |  A+A-


DrSudhakar1

ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್

Posted By : Lingaraj Badiger
Source : UNI

ಬೆಂಗಳೂರು: ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ಗುರುವಾರ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲಸಿಕೆಯನ್ನು ಜನತೆ ಯಾವುದೇ ಹಿಂಜರಿಕೆ ಇಲ್ಲದೆ ತೆಗೆದುಕೊಳ್ಳಬಹುದು. ಕೊರೋನಾ ಲಸಿಕೆ ಬಗ್ಗೆ ಸುಳ್ಳು ವದಂತಿಗಳಿಗೆ ಕಿವಿಗೊಡದೆ, ಕೇವಲ ಸರ್ಕಾರದ ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಲಸಿಕೆ ಪಡೆದ ಕೆಲವರಲ್ಲಿ ಸೋಂಕು ಕಾಣಿಸಿಕೊಂಡಿರುವ ಸಂಗತಿ ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಲಸಿಕೆ ಸುರಕ್ಷತೆ ಮತ್ತು ದಕ್ಷತೆ ಬಗ್ಗೆ ಮತ್ತೊಮ್ಮೆ ಆರೋಗ್ಯ ಸಚಿವ ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಕೊರೋನಾ ಲಸಿಕೆಯ ಮೊದಲನೇ ಡೋಸ್ ಪಡೆದ 28 ದಿನಗಳ ನಂತರ ಎರಡನೇ ಡೋಸ್ ಪಡೆಯಬೇಕಿದೆ. ಎರಡನೇ ಡೋಸ್ ಪಡೆದ 14-15 ದಿನಗಳ ನಂತರ, ಅಂದರೆ, ಮೊದಲನೇ ಡೋಸ್ ಪಡೆದ ಸುಮಾರು 45 ದಿನಗಳ ನಂತರವಷ್ಟೇ ರೋಗ ನಿರೋಧಕ ಶಕ್ತಿ ಬರಲಿದೆ. ಈ ನಡುವೆ ಲಸಿಕೆ ಪಡೆದ ವ್ಯಕ್ತಿ ವೈರಾಣುವಿನ ಸಂಪರ್ಕಕ್ಕೆ ಬಂದಿದ್ದರೆ ಸೋಂಕು ತಗುಲುವ ಸಾಧ್ಯತೆ ಇರುತ್ತದೆ ಎಂದು ವಿವರಣೆ ನೀಡಿದ್ದಾರೆ.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp