ರಾಜ್ಯದಲ್ಲಿ 60 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ರಾಜ್ಯದಲ್ಲಿ ಐದು ವರ್ಷದೊಳಗಿನ 60 ಲಕ್ಷ ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಿಸಲಾಗುತ್ತಿದೆ. ಸಿಬ್ಬಂದಿ ಅಗತ್ಯತೆ ಇರುವುದರಿಂದ ಈ ನಾಲ್ಕು ದಿನ ಕೋವಿಡ್ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Published: 31st January 2021 04:34 PM  |   Last Updated: 31st January 2021 04:34 PM   |  A+A-


DrKSudhakar1

ಡಾ. ಕೆ. ಸುಧಾಕರ್

Posted By : Srinivas Rao BV
Source : Online Desk

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಐದು ವರ್ಷದೊಳಗಿನ 60 ಲಕ್ಷ ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಿಸಲಾಗುತ್ತಿದೆ. ಸಿಬ್ಬಂದಿ ಅಗತ್ಯತೆ ಇರುವುದರಿಂದ ಈ ನಾಲ್ಕು ದಿನ ಕೋವಿಡ್ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪೋಷಕರು ಎಷ್ಟು ಬಾರಿ ಲಸಿಕೆ ಹಾಕಿಸಿದರೂ ಮತ್ತೆ ಲಸಿಕೆ ಹಾಕಿಸಬೇಕು. ಕೆಲವೆಡೆ ಮೊಬೈಲ್ ಘಟಕದ ವ್ಯವಸ್ಥೆ ಮಾಡಲಾಗಿದೆ. ಕಳೆದ 11 ವರ್ಷದಲ್ಲಿ ಹೊಸ ಪೋಲಿಯೋ ಪ್ರಕರಣ ದಾಖಲಾಗಿಲ್ಲ. ಆದರೆ ಪಾಕಿಸ್ತಾನ, ಅಫ್ಘನಿಸ್ತಾನ ದೇಶಗಳಲ್ಲಿ ಈ ರೋಗ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಲಸಿಕೆ ನೀಡಲಾಗುತ್ತಿದೆ ಎಂದರು.

ಕೋವಿಡ್ ಬಂದ ಬಳಿಕ ಆರ್ಥಿಕ ಸಂಕಷ್ಟ ಉಂಟಾಗಿದೆ. ಇಂತಹ ಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸದೃಢ ದೇಶ ನಿರ್ಮಿಸುತ್ತಿದ್ದಾರೆ. ಈ ಬಾರಿ ಬಿಡುಗಡೆಯಾದ ಆರ್ಥಿಕ ಸಮೀಕ್ಷೆಯಲ್ಲಿ ಆಶಾದಾಯಕ ಅಂಶಗಳು ಕಂಡುಬಂದಿವೆ. ಈ ಬಾರಿ ಆಶಾದಾಯಕವಾದ ಬಜೆಟ್ ಮಂಡನೆಯಾಗಲಿದೆ. ಮುಂದಿನ ವರ್ಷದಲ್ಲಿ ಆರ್ಥಿಕ ಚೇತರಿಕೆಯ ವೇಗ ಹೆಚ್ಚಲಿದೆ ಎಂದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಗೃಹಕಚೇರಿ ಕೃಷ್ಣಾದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡರು.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp