ಡಿಆರ್ ಡಿಒ ಮಾಜಿ ವಿಜ್ಞಾನಿ, ಪ್ರಸಿದ್ಧ ವಿಜ್ಞಾನ ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ

ಡಿಆರ್ ಡಿಒ ಮಾಜಿ ವಿಜ್ಞಾನಿ, ಹೆಚ್ಎಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್ ಸುಧೀಂದ್ರ ಹಾಲ್ದೊಡ್ಡೇರಿ ಜುಲೈ 2 ರಂದು ಮಧ್ಯಾಹ್ನ ನಿಧನರಾಗಿದ್ದಾರೆ. 
ಮಾಜಿ ವಿಜ್ಞಾನಿ, ಪ್ರಸಿದ್ಧ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ
ಮಾಜಿ ವಿಜ್ಞಾನಿ, ಪ್ರಸಿದ್ಧ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ

ಬೆಂಗಳೂರು: ಡಿಆರ್ ಡಿಒ ಮಾಜಿ ವಿಜ್ಞಾನಿ, ಹೆಚ್ಎಎಲ್ ಸಂಸ್ಥೆಯ ಹಿರಿಯ ನಿವೃತ್ತ ಇಂಜಿನಿಯರ್, ಅಂಕಣಕಾರ ಸುಧೀಂದ್ರ ಹಾಲ್ದೊಡ್ಡೇರಿ ಜುಲೈ 2 ರಂದು ಮಧ್ಯಾಹ್ನ ನಿಧನರಾಗಿದ್ದಾರೆ. 

ಅವರಿಗೆ 61 ವರ್ಷ ವಯಸ್ಸಾಗಿತ್ತು. ವಾರದ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೊಗ್ಯ ಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದ ವೈದ್ಯರು "ಸುಧೀಂದ್ರ ಹಾಲ್ದೊಡ್ಡೇರಿ ಅವರ ಆರೋಗ್ಯ ಸುಧಾರಣೆ ಪರಿಸ್ಥಿತಿ ಕಷ್ಟವಿದೆ" ಎಂಬ ಮಾಹಿತಿ ನೀಡಿದ್ದರು. 

ಸುಧೀಂದ್ರ ಹಾಲ್ದೊಡ್ಡೇರಿ ಅವರ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಸ್ಥಗಿತಗೊಂಡಿದ್ದರಿಂದ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ದೇಹದಾನಕ್ಕೆ ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಸುಧೀಂದ್ರ ಹಾಲ್ದೊಡ್ಡೇರಿ ಅವರು ವಿಜಯ ಕರ್ನಾಟಕ, ಕನ್ನಡ ಪ್ರಭ ಸೇರಿದಂತೆ ಅನೇಕ ಪತ್ರಿಕೆಗಳಿಗೆ ವಿಜ್ಞಾನ ಅಂಕಣಗಳನ್ನು ಬರೆಯುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com