ಚಿಕ್ಕಬಳ್ಳಾಪುರ: ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಇಬ್ಬರು ಮಹಿಳೆಯರಿಗಾಗಿ ಪೋಲೀಸರ ಶೋಧ

ಹೃದಯ ವಿದ್ರಾವಕ ವ ಘಟನೆಯಲ್ಲಿ, ಒಂದು ದಿನದ ಹೆಣ್ಣು ಮಗುವೊಂದು ಚಿಕ್ಕಬಳ್ಳಾಪುರಜಿಲ್ಲೆಯ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಶೌಚಾಲಯದ ಕಿಟಕಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಹೃದಯ ವಿದ್ರಾವಕ ವ ಘಟನೆಯಲ್ಲಿ, ಒಂದು ದಿನದ ಹೆಣ್ಣು ಮಗುವೊಂದು ಚಿಕ್ಕಬಳ್ಳಾಪುರಜಿಲ್ಲೆಯ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಶೌಚಾಲಯದ ಕಿಟಕಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮಗುವನ್ನು ಗಮನಿಸಿದ ಆಸ್ಪತ್ರೆ ಗ್ರೂಪ್ ಡಿ ಉದ್ಯೋಗಿ ವೆಂಕಟೇಶಪ್ಪ, ಈ ಕುರಿತು ವೈದ್ಯರಿಗೆ ಮಾಹಿತಿ ನೀಡಿದಾಗ ವೈದ್ಯರು ಪರಿಶೀಲನೆಯ ನಂತರ ಶಿಶು ಸತ್ತಿದೆ ಎಂದು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ್ ಅವರ ನೇರ ಮೇಲ್ವಿಚಾರಣೆಯಲ್ಲಿ ತನಿಖೆಗಾಗಿ ತಂಡವನ್ನು ರಚಿಸಲಾಗಿದೆ ಎಂದು ಕೇಂದ್ರ ವ್ಯಾಪ್ತಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಎಂ. ಚಂದ್ರಶೇಖರ್ ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದು ಘಟನೆಯಲ್ಲಿ ಇಬ್ಬರು ಮಹಿಳೆಯರು ಭಾಗಿಯಾದ್ದು ಅವರಿಗೆ ಹುಡುಕಾಟ ನಡೆದಿದೆ ಎಂದು ಮಿಥುನ್ ಕುಮಾರ್ ತಿಳಿಸಿದ್ದಾರೆ. ದಪ್ಪ ಹಗ್ಗದ ಸಹಾಯದಿಂದ ಮಗುವನ್ನು ನೇಣು ಹಾಕಲಾಗಿದೆ. ಈ ಬಗ್ಗೆ ತಕ್ಷಣವೇ ವರದಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗೆ ಸೂಚಿಸಲಾಗಿದೆ ಎಂದು ಚಿಕ್ಕಬಳ್ಳಾಪುರಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಕೀಯ ಅಧಿಕಾರಿ ಡಾ.ಸಂತೋಷ್, ಆಸ್ಪತ್ರೆಯ  ರೋಗಿಗಳ ವಿಭಾಗ ಮತ್ತು ಇಂಜೆಕ್ಷನ್ ಕೊಠಡಿಯ ಎದುರಿನ ಶೌಚಾಲಯದಲ್ಲಿ ಮಗು ಪತ್ತೆಯಾಗಿದೆ.

100 ಹಾಸಿಗೆಗಳನ್ನು ಹೊಂದಿರುವ ಜನರಲ್ ಆಸ್ಪತ್ರೆ ಮತ್ತು 60 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಎರಡು ಆಸ್ಪತ್ರೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಡಾ.ಸಂತೋಷ್ ಹೇಳಿದರು. ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ, ಶುಕ್ರವಾರ ಆರು ಹೆರಿಗೆಗಳನ್ನು ನಡೆಸಲಾಗಿದ್ದು, ಎಲ್ಲಾ ಶಿಶುಗಳು ಮತ್ತು ತಾಯಂದಿರು ಸುರಕ್ಷಿತರಾಗಿದ್ದಾರೆ ಎಂದು ಅವರು ಹೇಳಿದರು

ಮೃತ ಶಿಶುವಿನ ಹೊಕ್ಕುಳಬಳ್ಳಿಯನ್ನು ಕತ್ತರಿಸದ ಕಾರಣ ಮಗುವನ್ನು ಮನೆಯಲ್ಲಿಯೇ ಹೆರಿಗೆ ಮಾಡಿಸಿದ ಸಾಧ್ಯತೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com