ಎಸ್‌ಸಿಎಸ್‌ಪಿ, ಟಿಎಸ್‌ಪಿ ಕ್ರಿಯಾ ಯೋಜನೆಗೆ ಅನುಮೋದನೆ: ಮುಖ್ಯಮಂತ್ರಿ ಯಡಿಯೂರಪ್ಪ

ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ ಸಿಎಸ್ ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್ ಪಿ) ಅಡಿಯಲ್ಲಿ ಪ್ರಸಕ್ತ ವರ್ಷ 26,005 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಿ.ಎಸ್  ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್  ಶುಕ್ರವಾರ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿನ ಸಭೆ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿನ ಸಭೆ

ಬೆಂಗಳೂರು: ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ ಸಿಎಸ್ ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್ ಪಿ) ಅಡಿಯಲ್ಲಿ ಪ್ರಸಕ್ತ ವರ್ಷ 26,005 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಿ.ಎಸ್  ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್  ಶುಕ್ರವಾರ ಅನುಮೋದನೆ ನೀಡಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಅಭಿವೃದ್ಧಿ ಪರಿಷತ್  ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಪ್ರಸಕ್ತ ವರ್ಷ ಎಸ್ ಸಿಎಸ್ ಪಿ ಮತ್ತು ಟಿಎಸ್ ಪಿ ಅಡಿಯಲ್ಲಿ 26,005.01 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಎಸ್ ಸಿಎಸ್ ಪಿ ಅಡಿಯಲ್ಲಿ  18,331.54 ಕೋಟಿ ರೂ. ಮತ್ತು ಟಿಎಸ್ ಪಿ ಅಡಿಯಲ್ಲಿ 7,673.47 ಕೋಟಿ ರೂ. ವೆಚ್ಚ ಮಾಡುವ ಪ್ರಸ್ತಾವಗಳುಳ್ಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದರು.

ಎರಡೂ ಉಪ ಯೋಜನೆಗಳ ಅಡಿಯಲ್ಲಿ ಮೊದಲ ಕಂತಿನ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಹೊಸ ಕಾರ್ಯಕ್ರಮಗಳ ಅನುಷ್ಠಾನವನ್ನು ತ್ವರಿತವಾಗಿ ಆರಂಭಿಸಲಾಗುವುದು ಎಂದರು. ಕಳೆದ ಆರ್ಥಿಕ ವರ್ಷದಲ್ಲಿ ಎಸ್ ಸಿಎಸ್ ಪಿ ಮತ್ತು ಟಿಎಸ್ ಪಿ ಯೋಜನೆಯ ಯಾವುದೇ ಅನುದಾನವನ್ನು ಬಾಕಿ ಉಳಿಸಿಕೊಂಡಿಲ್ಲ ಅಥವಾ ಅನ್ಯ ಉದ್ದೇಶಕ್ಕೆ ವರ್ಗಾವಣೆ ಮಾಡಿಲ್ಲ  ಎಂದು ಯಡಿಯೂರಪ್ಪ ತಿಳಿಸಿದರು.

 ಗೋವಿಂದ ಕಾರಜೋಳ ಮಾತನಾಡಿ, ಕಳೆದ ವರ್ಷ ಎಸ್ ಸಿಎಸ್ ಪಿ ಮತ್ತು ಟಿಎಸ್ ಪಿ ಅಡಿಯಲ್ಲಿ ₹ 25,945.90 ಕೋಟಿ ಅನುದಾನ ಮೀಸಲಿಡಲಾಗಿತ್ತು. ₹ 24,646.99 ಕೋಟಿ ವೆಚ್ಚ ಮಾಡಲಾಗಿದೆ. ಯಾವುದೇ ಅನುದಾನದ ವರ್ಗಾವಣೆ ಅಥವಾ ಉಳಿಕೆ ಆಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

2020-21ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಅಭಿವೃದ್ದಿಗಾಗಿ 18,131.12 ಕೋಟಿ ರೂ. ಗಳನ್ನು ಒದಗಿಸಿದ್ದು, 17,352.45 ಕೋಟಿ ರೂ.ಗಳು ವೆಚ್ಚವಾಗಿರುತ್ತದೆ. ಶೇಕಡ 96 ರಷ್ಟು ಪ್ರಗತಿಯಾಗಿದೆ. ಪರಿಶಿಷ್ಟ ಪಂಗಡದವರ ಅಭಿವೃದ್ದಿಗಾಗಿ 7814.78 ಕೋಟಿ ರೂ.ಗಳನ್ನು ಒದಗಿಸಿದ್ದು, 7294.54 ಕೋಟಿ ರೂ .ಗಳು ವೆಚ್ಚವಾಗಿರುತ್ತದೆ. ಶೇಕಡ 93 ರಷ್ಟು ಪ್ರಗತಿಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com