ಅನ್ ಲಾಕ್ 3.0: ದೇವಾಲಯ, ಬಾರ್, ಮಾಲ್ ಓಪನ್; ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ- ಸಿಎಂ ಯಡಿಯೂರಪ್ಪ

ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದಲ್ಲಿ ಅನ್ ಲಾಕ್ 3.0 ಮಾರ್ಗಸೂಚಿ ಪ್ರಕಟಿಸಿದೆ.
ಬಿ,ಎಸ್. ಯಡಿಯೂರಪ್ಪ
ಬಿ,ಎಸ್. ಯಡಿಯೂರಪ್ಪ

ಬೆಂಗಳೂರು: ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದಲ್ಲಿ ಅನ್ ಲಾಕ್ 3.0 ಮಾರ್ಗಸೂಚಿ ಪ್ರಕಟಿಸಿದೆ.

ಅದರಂತೆ ದೇವಾಲಯ, ಬಾರ್, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಅಲ್ಲದೆ ರಾಜ್ಯದಲ್ಲಿ ಇದುವರೆಗೆ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ವನ್ನು ತೆಗೆದುಹಾಕಲಾಗಿದೆ.

ಜೊರೋನಾ ಉಸ್ತುವಾರಿ ಸಚಿವರು, ಟಾಸ್ಕ್ ಫೋರ್ಸ್ ಸದಸ್ಯರುಮತ್ತು ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಿ,ಎಸ್. ಯಡಿಯೂರಪ್ಪ ಜುಲೈ 5ರಿಂದ 19ರವರೆಗೆ ಈ ಮಾರ್ಗಸೂಚಿ ಅನ್ವಯವಾಗಲಿದೆ. ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ.

ಅಲ್ಲದೆ ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕೈಗಾರಿಕೆಗಳಲ್ಲಿಶೇ ನೂರರಷ್ಟು ಉದ್ಯೋಗಿಗಳಿಗೆ ಅವಕಾಶವಿದ್ದು ಮೆಟ್ರೋ, ಬಸ್ ಗಳಲ್ಲಿ ಶೇ .ನೂರರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.

ಪ್ರಮುಖ ಮುಖ್ಯಾಂಶಗಳು

  • ಈಜುಕೊಳ,ಕ್ರೀಡಾ ಸಂಕೀರ್ಣಗಳನ್ನು ಕ್ರೀಡಾಪಟುಗಳ ತರಬೇತಿಗಾಗಿ ಮಾತ್ರ ಬಳಸಿಕೊಳ್ಳಬಹುದು.
  • ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಟನೆಗಳಿಗೆ ಅವಕಾಶವಿರುವುದಿಲ್ಲ.
  • ಅಂತ್ಯ ಸಂಸ್ಕಾರಕ್ಕೆ 20 ಮಂದಿಗೆ ಅವಕಾಶ, ಮದುವೆಗಳಲ್ಲಿ 100 ಜನ ಭಾಗವಹಿಸಬಹುದು.
  • ಶಾಲೆ ತೆರೆಯುವ ಬಗ್ಗೆ ಪ್ರತ್ಯೇಕ ಸಭೆ ನಡೆಸಿ ತೀರ್ಮಾನ, ಆನ್ ಲೈನ್ ತರಗತಿಗಳು ಈಗಿನಂತೆಯೇ ಮುಂದುವರಿಯಲಿದೆ.
  • ಮಾಲ್ ತೆರೆಯಲು ಅವಕಾಶವಿದ್ದರೂ ಚಿತ್ರಮಂದಿರಗಳು ತೆರೆಯಲು ಅವಕಾಶವಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com