ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 352 ಸೇರಿ ಇಂದು 1,564 ಪ್ರಕರಣ ಪತ್ತೆ, 59 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಕಡಿಮೆಯಾಗುತ್ತಿದ್ದು ಇಂದು 1,564 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,53,643ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಡಿಮೆಯಾಗುತ್ತಿದ್ದು ಇಂದು 1,564 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,53,643ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 59 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,367ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 352 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,14,235ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 4,775 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,73,407ಕ್ಕೆ ಏರಿಕೆಯಾಗಿದೆ. ಇನ್ನು 44,846 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,53,083 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,564 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.02ಕ್ಕೆ ಇಳಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com